ದಾವಣಗೆರೆ: ರಸ್ತೆ ದಾಟುತ್ತಿದ್ದ ಬಾಲಕನಿಗೆ ಅಡುವೆ ಅನಿಲ ಸಿಲಿಂಡರ್ ಕೊಂಡೊಯ್ಯುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಕೊಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.ಅಜಯ್ (09) ಸಾವನ್ನಪ್ಪಿದ್ದ ಬಾಲಕ. ಲಾರಿಯ ಚಕ್ರ ಬಾಲಕನ ತಲೆ ಮೇಲೆ ಹರಿದ ಕಾರಣ ಛಿದ್ರವಾಗಿದ್ದು, ಪುತ್ರನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಬಳಿಕ ರಾಜ್ಯ ಹೆದ್ದಾರಿ 25ರ ವಾಹನ ಸಂಚಾರ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.ಕಳೆದ ಒಂದು ತಿಂಗಳಲ್ಲಿ ಐದಕ್ಕೂ ಹೆಚ್ಚು ಅಪಘಾತ ಇದೇ ರಸ್ತೆಯಲ್ಲಿ ಸಂಭವಿಸಿದ್ದು, ರಸ್ತೆ ಹದಗೆಟ್ಟ ಹಿನ್ನೆಲೆ ಪ್ರತಿನಿತ್ಯ ದುರಂತಗಳು ನಡೆಯುತ್ತಿದೆ. ಈ ಕುರಿತು ಸೂಕ್ತ ಕ್ರಮಕೈಗೊಳ್ಳುಂತೆ ಆಗ್ರಹಿಸಿದ್ದರು ಯಾವುದೇ ಪ್ರಯೋಜನ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಬಾಲಕನ ಶವವನ್ನು ರಸ್ತೆ ಮಧ್ಯೆ ಇಟ್ಟು ಪತ್ರಿಭಟನೆ ನಡೆಸಿದರು.ಗ್ರಾಮಸ್ಥರು ರಸ್ತೆ ತಡೆ ನಡೆಸಿದ ಪರಿಣಾಮವಾಗಿ ಶಿವಮೊಗ್ಗ – ಹರಿಹರ ಮಾರ್ಗವಾಗಿ ಸಂಚರಿಸುವ ವಾಹನಗಳು ಸಾಲುಗಟ್ಟಿ ನಿಂತಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಮಲೆಬೆನ್ನೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


