ಕೊಪ್ಪಳ: ಒಳ್ಳೆಯ ಮುಹೂರ್ತವನ್ನು ನೋಡಿಕೊಂಡು ನಾನು ಸಹ ಕಾಂಗ್ರೆಸ್ ಪಕ್ಷವನ್ನು ಸೇರುತ್ತೇನೆ ಎಂದು ಅರಣ್ಯ ಇಲಾಖೆ ಸಚಿವ ಆರ್.ಶಂಕರ್ ಹೇಳಿದ್ದಾರೆ.ಹೌದು, ಕೆ.ಪಿ.ಜೆ.ಪಿ ಪಕ್ಷದಿಂದ ಆಯ್ಕೆಯಾಗಿದ್ದ ಶಂಕರ್ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಸದ್ಯ ಈಗ ಅವರು ನಾನು ಅಧಿಕೃತವಾಗಿ ಕಾಂಗ್ರೆಸ್ಸನ್ನು ಸೇರುತ್ತೇನೆ ಎಂದು ಹೇಳಿದ್ದಾರೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ರೀತಿಯ ಒತ್ತಡಗಳು ಕಾಂಗ್ರೆಸ್ಸಿನಿಂದ ಇಲ್ಲ. ನಾನು ಒಳ್ಳೆಯ ಮುಹೂರ್ತ ನೋಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿನಿ. ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವು 5 ವರ್ಷ ಪೂರ್ಣಗೊಳಿಸುತ್ತದೆ. ನನ್ನ ಸಂಪೂರ್ಣ ಬೆಂಬಲ ಸಮ್ಮಿಶ್ರ ಸರ್ಕಾರಕ್ಕೆ ಇದೆ. ನನ್ನಿಂದ ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಸದ್ಯ ಎಲ್ಲಾ ರೀತಿಯಿಂದಲು ಯೋಚನೆ ಮಾಡಿದ್ದು, ಶೀಘ್ರವೇ ಕಾಂಗ್ರೆಸ್ ಸೇರುತ್ತೇನೆ ಎಂದು ತಿಳಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


