ಬೆಂಗಳೂರು: ಬೈಕ್ ಹಾಗೂ ಸಿಲಿಂಡರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಬಂಧಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಮಂಡೂರು ಸಮೀಪದ ಕಟ್ಟುಗೊಲ್ಲಹಳ್ಳಿ ಬಳಿ ನಡೆದಿದೆ.ಬಸವರಾಜ್ ಮೃತ ದುರ್ದೈವಿ. ಈತ ದೇವನಹಳ್ಳಿ ತಾಲೂಕಿನ ಭಟ್ಟರಮಾರೆನಹಳ್ಳಿ ಮೂಲದವರು ಎಂದು ತಿಳಿದು ಬಂದಿದೆ. ಬೈಕ್ ಸವಾರ ಏರ್ ಪೋರ್ಟ್ ಮಾರ್ಗವಾಗಿ ಹೋಗುತ್ತಿದ್ದರು. ಈ ವೇಳೆ ಎದುರುಗಡೆಯಿಂದ ಗ್ಯಾಸ್ ಸಿಲಿಂಡರ್ ಲಾರಿ ಬಂದು ಬೈಕಿಗೆ ಡಿಕ್ಕಿ ಹೊಡೆದಿದೆ.ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಬಸವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಹಾಗೂ ಸಿಲಿಂಡರ್ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೈಕ್ ಮತ್ತು ಲಾರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಅಪಘಾತದಿಂದಾಗಿ ಬೂದಿಗೆರೆ ಮಾರ್ಗದ ಏರ್ ಪೋರ್ಟ್ ರಸ್ತೆಯು ಸಂಪೂರ್ಣ ಬಂದ್ ಆಗಿತ್ತು.ಅಪಘಾತ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


