ಶಿವಮೊಗ್ಗ: ಲೋಕಸಭಾ ಉಪಚುನಾವಣೆಯ ಪ್ರಚಾರ ಭರದಿಂದ ಸಾಗುತ್ತಿದ್ದು, ಜಿಲ್ಲೆಯ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕಣದಲ್ಲಿ ಹಣದ ಸಾಗಾಟ ಕಂಡು ಬಂದಿದೆ.ಮಡಕೆ ಚೀಲೂರು ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 30 ಲಕ್ಷ ರೂಪಾಯಿ ಹಣವನ್ನು ಫ್ಲೈಯಿಂಗ್ ಸ್ಕ್ವಾಡ್ ವಶಪಡಿಸಿಕೊಂಡಿದ್ದಾರೆ. ಕಾರೊಂದು ಹೊನ್ನಾಳಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿತ್ತು. ಈ ವೇಳೆ ಫ್ಲೈಯಿಂಗ್ ಸ್ಕ್ವಾಡ್ ಕಾರು ತಡೆದು ತಪಾಸಣೆ ಮಾಡಿದ್ದಾರೆ. ಆಗ ದಾಖಲೆ ಇಲ್ಲದೇ ಹಣ ಸಾಗಿಸುತ್ತಿದ್ದು ಬೆಳಕಿಗೆ ಬಂದಿದೆ.ಹಣ ಹಾಗೂ ಕಾರ್ ಶಿವಮೊಗ್ಗದ ಗುರುಪುರದ ಶ್ರೀನಿವಾಸ್ ಎಂಬವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಇದು ಅಡಕೆ ಮಾರಿದ ಹಣ, ಬಿಲ್ ಹಾಜರು ಮಾಡುತ್ತೇನೆಂದು ಶ್ರೀನಿವಾಸ ಹೇಳಿದ್ದಾರೆ. ಆದರೆ ಗ್ರಾಮಾಂತರ ಠಾಣಾ ಪೊಲೀಸರು ಹಣ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಇನ್ನೂ ಯಾವುದೇ ದೂರು ದಾಖಲಾಗಿಲ್ಲ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
 Advertisement 









 Advertisement 




ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


