ಬೆಂಗಳೂರು: ವಿದ್ಯಾರ್ಥಿಗಳಿಬ್ಬರು ಕಾಲೇಜ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ.ಜಾಲಹಳ್ಳಿ ಕ್ರಾಸ್‍ನಲ್ಲಿರುವ ಕ್ಲಾರೆಟ್ ಕಾಲೇಜು ವಿದ್ಯಾರ್ಥಿಗಳಾದ ಶೋಯಬ್ ಮತ್ತು ಹರೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಕೂಡ ಫಸ್ಟ್ ಬಿಕಾಂ ವಿದ್ಯಾರ್ಥಿಗಳಾಗಿದ್ದು, ಮತ್ತಿಕೆರೆಯ ಬಿಕೆ ನಗದವರಾಗಿದ್ದಾರೆ. ಶೋಯಬ್, ಹರೀಶ್ ಸೋಮವಾರ ಕಾಲೇಜಿಗೆ ಕುಡಿದು ಬಂದಿದ್ದಾರೆ. ಇದನ್ನು ಗಮನಿಸಿದ ಉಪನ್ಯಾಸಕರು ಇಬ್ಬರನ್ನ ತರಾಟೆಗೆ ತಗೆದುಕೊಂಡಿದ್ದಾರೆ.ಎಲ್ಲಾ ವಿದ್ಯಾರ್ಥಿಗಳ ಎದುರು ಅವಮಾನ ಮಾಡಿದ್ದಕ್ಕೆ ಶೋಯಬ್ ಮತ್ತು ಹರೀಶ್ ಒಂದೊಂದು ಗಂಟೆ ಅಂತರದಲ್ಲಿ ಇಬ್ಬರು ಕಾಲೇಜ್ ಕಟ್ಟಡದಿಂದ ಕೆಳಗೆ ಜಿಗಿದಿದ್ದಾರೆ. ಈ ಘಟನೆಯಲ್ಲಿ ಇಬ್ಬರಿಗೂ ಗಂಭೀರ ಗಾಯವಾಗಿದ್ದು, ತಕ್ಷಣ ಅವರನ್ನು ಉಪನ್ಯಾಸಕರ ಕಾರಿನಲ್ಲಿಯೇ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದು, ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


