ಮಡಿಕೇರಿ: ಕೊಡಗಿನಲ್ಲಿ ಗುಂಡಿನ ಮೊರೆತ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಕೆಲದಿನಗಳ ಹಿಂದೆಯಷ್ಟೇ ಬಾಕಿ ಹಣ ಕೇಳಿದ್ದಕ್ಕೆ ಕ್ಯಾಂಟೀನ್ ಯುವಕನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ನಡೆದಿದೆ.ಭಾನುವಾರ ರಾತ್ರಿ ನಡೆದ ಗುಂಡಿನ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಡಿಕೇರಿ ತಾಲೂಕಿನ ಎಮ್ಮೆತಾಳುವಿನಲ್ಲಿ ನಡೆದಿದೆ. ಎಮ್ಮೆತಾಳು ಗ್ರಾಮದ ರಂಜಿತ್(31) ನಿವಾಸಿ ಮೃತ ದುರ್ದೈವಿಯಾಗಿದ್ದಾನೆ. ಅದೇ ಗ್ರಾಮದ ದಿನೇಶ್ ಎಂಬಾತ ರಂಜಿತ್ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.ರಂಜಿತ್ ಹಾಗೂ ದಿನೇಶ್ ಪ್ರತ್ಯೇಕವಾಗಿ ಬೇಟೆಗೆ ತೆರಳಿದ್ದರು. ಈ ವೇಳೆ ಕಾಡು ಕುರಿಗೆಂದು ಹಾರಿಸಿದ ಗುಂಡು ರಂಜಿತ್ ಗೆ ತಗುಲಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಿಂದಾಗಿ ರಂಜಿತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಂಜಿತ್ ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


