ಕಲಬುರಗಿ: ಮಹಿಳೆಯೊಬ್ಬರಿಗೆ ಬೈಕಿನಲ್ಲಿ ಡ್ರಾಪ್ ನೀಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ 60 ಗ್ರಾಂ ಚಿನ್ನಾಭರಣ ದೋಚಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸೊನ್ನಾ ಕ್ರಾಸ ಬಳಿ ನಡೆದಿದೆ.ಗುಂಡಮ್ಮ (55) ಹಲ್ಲೆಗೊಳಗಾಗಿ ಆಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಹೋಗುತ್ತಿದ್ದ ವೇಳೆ ಹಲ್ಲೆ ನಡೆಸಲಾಗಿದೆ.ನಡೆದಿದ್ದು ಏನು?
ಗುಂಡಮ್ಮ ಅವರ ಸಂಬಂಧಿಯೊಬ್ಬರು ರೇವನೂರ್ ಗ್ರಾಮದಲ್ಲಿ ಸಾವನ್ನಪ್ಪಿದ್ದರು. ಅವರ ಅಂತ್ಯಕ್ರಿಯೆಗೆ ಹೋಗುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಡ್ರಾಪ್ ನೀಡುವ ನಾಟಕವಾಡಿದ್ದಾನೆ. ನಾನು ಕೂಡ ಆದೇ ಅಂತ್ಯಕ್ರಿಯೆಗೆ ಹೋಗುತ್ತಿದ್ದು, ನನ್ನೊಂದಿಗೆ ಬನ್ನಿ ಎಂದು ಬೈಕಿನಲ್ಲಿ ಕೂರಿಸಿ ಕರೆದುಕೊಂಡು ಹೋಗಿದ್ದಾನೆ. ಮಾರ್ಗ ರೇವನೂರ ಕ್ರಾಸ್ ಬಳಿಯ ಬ್ಯಾರೇಜ್ ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿ ಆಭರಣ ಕೊಡುವಂತೆ ಹಲ್ಲೆ ನಡೆಸಿದ್ದಾನೆ. ಬಳಿಕ ಕೈನಲ್ಲಿದ್ದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.ಘಟನೆ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


