ಬೆಂಗಳೂರು: ವಿಲನ್ ಚಿತ್ರ ಬಿಡುಗಡೆಯಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಕೋಣವನ್ನು ಬಲಿಕೊಟ್ಟಿದ್ದಾರೆ. ಥಿಯೇಟರ್ ಮುಂದೆ ಕೋಣದ ತಲೆಯನ್ನು ಒಂದೇ ಏಟಿಗೆ ಕತ್ತರಿಸಿ, ಬಳಿಕ ಆ ತಲೆಯನ್ನು ಹಿಡಿದು ಅಭಿಮಾನಿಯೊಬ್ಬ ವಿಲನ್ ಪೋಸ್ಟರ್ ಗೆ ರಕ್ತದ ಅಭಿಷೇಕ ಮಾಡಿದ್ದಾನೆ.ಕೋಣ ಕಡಿದು ರಕ್ತದ ಅಭಿಷೇಕ ಮಾಡಿದ್ದು ಎಲ್ಲಿ ಎನ್ನುವುದು ಗೊತ್ತಿಲ್ಲ. ಫೋಟೋ ಮತ್ತು ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರ ಜೊತೆಯಲ್ಲೇ ಅಭಿಮಾನಿಗಳು ಕುರಿಯನ್ನು ಕಡಿದು ಸುದೀಪ್ ಭಾವಚಿತ್ರಕ್ಕೆ ರಕ್ತದ ಅಭಿಷೇಕ ಮಾಡಿದ್ದಾರೆ. ಕುರಿಯನ್ನು ಕಡಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಅಭಿಮಾನವಿದ್ರೆ ಅನಾಥಾಶ್ರಮದಲ್ಲಿರುವ ಮಕ್ಕಳಿಗೆ ನಟನ ಹೆಸರಿನಲ್ಲಿ ಆಹಾರ ನೀಡಲಿ ಅಥವಾ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮಾಡಲಿ. ಅದನ್ನು ಬಿಟ್ಟು ಪ್ರಾಣಿಗಳನ್ನು ಸಾರ್ವಜನಿಕವಾಗಿ ಕಡಿದು ಅಜ್ಞಾನಿಗಳಂತೆ ವರ್ತಿಸಿರುವುದು ಸರಿಯಲ್ಲ ಎಂದು ಜನ ಈ ಅಭಿಮಾನಿಗಳ ವಿರುದ್ಧ ಕಿಡಿಕಾರುತ್ತಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


