ಬೆಂಗಳೂರು: ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಅಡ್ರೆಸ್ ಕೇಳುವಾಗ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಐದು ಜನರಿಗೆ ಗಂಭೀರವಾಗಿ ಗಾಯ ಗೊಂಡಿದ್ದಾರೆ.ಈ ಘಟನೆ ಕರ್ನಾಟಕ ಗಡಿ ಆನೇಕಲ್ ಗೆ ಹೊಂದಿಕೊಂಡಿರುವಂತಹ ಶೂಲಗಿರಿ ಬಳಿಯ ರಾಷ್ಟ್ರೀಯ ಹೆದ್ದಾರಿ ಗೋಪಸಂದ್ರದ ಬಳಿ ನಡೆದಿದೆ. ಮೇರಿ ಸರೋಜಾ(65), ಏಂಜೆಲ್(17), ಮೇರಿ ಅನಿತಾ(50) ಮತ್ತು ಡಲಾಸ್(20) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಮೃತರೆಲ್ಲಾ ಬೆಂಗಳೂರಿನ ಅಸ್ಟೀನ್ ಟೌನ್ ನಿವಾಸಿಗಳು ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ ತಮಿಳುನಾಡಿನ ನಾಗಮಂಗಲ ಬಳಿ ಇರುವ ಚರ್ಚ್ ಗೆ ಕುಟುಂಬ ಸಮೇತರಾಗಿ ಕಾರಿನಲ್ಲಿ ತೆರೆಳಿದ್ದರು. ಈ ವೇಳೆ ದಾರಿ ಗೊತ್ತಿಲ್ಲವಾಗಿದ್ದರಿಂದ ಅಡ್ರೆಸ್ ತಿಳಿದುಕೊಳ್ಳಲೆಂದು ರಸ್ತೆ ಬದಿ ಕಾರ್ ನಿಲ್ಲಿಸಿದ್ದರು. ಇದೇ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 5 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಕೃಷ್ಣಗಿರಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಈ ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಶೂಲಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶೂಲಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ ಮೃತಪಟ್ಟ ಕುಟುಂಬ ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


