ಬೆಂಗಳೂರು: ಉಪಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಸಿದ್ಧವಾಗಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಆಯೋಜಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ.ನಗರದ ಅಶೋಕ ಹೋಟೆಲ್‍ನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಎಚ್‍ಡಿಡಿ ಗರಂ ಆದರು. ಮಾಧ್ಯಮ ಮಿತ್ರರು ಹಳೆಯ ಹೇಳಿಕೆಗಳ ಬಗ್ಗೆ ಪ್ರಶ್ನೆ ಕೇಳಿ ನಮ್ಮ ಮನಸ್ಸನ್ನು ಕೆಡಸುವ ಪ್ರಯತ್ನ ಮಾಡಬೇಡಿ. ಪ್ರಚಲಿತ ವಿದ್ಯಮಾನ ಏನಿದೆಯೋ ಅದನ್ನು ಹಾಗೇ ನಡೆದುಕೊಂಡು ಹೋಗಲು ಬಿಟ್ಟು, ಹಳೆಯದನ್ನ ಕೆಣಕಬೇಡಿ ಎಂದು ಗರಂ ಆಗಿ ಹೇಳಿದರು.ಕೈ ಮುಗಿದು ಕೇಳುತ್ತೇನೆ ಹಿಂದಿನ ಹೇಳಿಕೆಗಳ ಬಗ್ಗೆ ಪ್ರಶ್ನೆ ಕೇಳಲೇಬೇಡಿ. ನನ್ನ ಬಗ್ಗೆ ನೀವು ಏನೆಲ್ಲಾ ಮಾಡಿದ್ದೀರಿ ಎನ್ನುವುದು ಗೊತ್ತಿದೆ. ನನಗೆ 86 ವರ್ಷ, ನಿಮ್ಮ ವಯಸ್ಸು ಎಷ್ಟು? ನನಗೆ ಪಾಠ ಮಾಡುತ್ತೀರಾ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು. ನಮ್ಮ ಅಜೆಂಡಾ ಕೋಮವಾದಿ ಪಕ್ಷ ಸೋಲಿಸುವುದು. ಎಲ್ಲಾ ಕಾರ್ಯಕರ್ತರಿಗೂ ಮನವಿ ಮಾಡಲಾಗಿದ್ದು, ಎಲ್ಲರೂ ಒಪ್ಪಿದ್ದಾರೆ. ನಮ್ಮ ಎರಡು ಪಕ್ಷದ ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡುತ್ತಾರೆ ಎಂದರು.ಈ ವೇಳೆ ಮಧ್ಯಪ್ರವೇಶ ಮಾಡಿದ ಸಿದ್ದರಾಮಯ್ಯ ಅವರು, ದೇವೇಗೌಡರಿಗೆ 60 ವರ್ಷ ರಾಜಕೀಯ ಅನುಭವ ಇದೆ. ಹಿಂದೆ ಏನು? ಮಾತನಾಡಿದ್ದೇವೆ ಎಂಬುದು ಮುಖ್ಯ ಅಲ್ಲ. ಸದ್ಯದ ಸ್ಥಿತಿ ಬಗ್ಗೆ ಚರ್ಚೆ ನಡೆಯಲಿ ಎಂದು ಹೇಳಿ ವಾತಾವರಣವನ್ನು ತಿಳಿಗೊಳಿಸುವ ಪ್ರಯತ್ನ ಮಾಡಿದರು.ಇತ್ತ ಸುದ್ದಿಗೋಷ್ಠಿ ಮುಗಿದ ಬಳಿಕ ಮಾಧ್ಯಮಗಳು ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಶಿವಕುಮಾರ್ ನೀಡಿದ್ದ ಹೇಳಿಕೆ ಕುರಿತು ಪ್ರಶ್ನೆ ಕೇಳಿದ್ದಕ್ಕೆ ಸಿದ್ದರಾಮಯ್ಯ, ಈ ವೇದಿಕೆಯಲ್ಲಿ ನಾನು ಲಿಂಗಾಯತ ಹೇಳಿಕೆ ಕುರಿತು ಮಾತನಾಡಲ್ಲ. ಅದನ್ನು ಮಾತನಾಡಲು ಬೇರೆ ವೇದಿಕೆಯಲ್ಲಿ ಸಿಗುತ್ತೇನೆ. ನೀವು ಏನೇ ಕೇಳಿದರೂ ಇಲ್ಲಿ ನಾನು ಮಾತನಾಡಲ್ಲರಿ ಎಂದು ಗರಂ ಆಗಿ ಪ್ರತಿಕ್ರಿಯಿಸಿದರು. ಇದನ್ನೂ ಓದಿ: 12 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿದ್ದು, ಎಚ್‍ಡಿಡಿ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ. ಲಿಂಗಾಯತ ಧರ್ಮದ ಬಗ್ಗೆ ಶಿಫಾರಸ್ಸು ಮಾಡುವಾಗ ಕ್ಯಾಬಿನೆಟ್ ರಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಿದ್ದೇವೆ. ಆಗ ಸಭೆಯಲ್ಲಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಕೂಡ ಇದ್ದರು. ಆದರೆ ಈಗ ಅವರು ಯಾವ ಅರ್ಥ ದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅವರ ಹೇಳಿಕೆಯಿಂದ ಪಕ್ಷ ಹಾಗೂ ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ನನ್ನನ್ನ ಯಾರು ಟಾರ್ಗೆಟ್ ಮಾಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


