ಬೆಂಗಳೂರು: ವಿಶ್ವಾದ್ಯಂತ ಸದ್ದು ಮಾಡುತ್ತಿರುವ ‘ದಿ-ವಿಲನ್’ ಚಿತ್ರದ ಕಿಚ್ಚ ಸುದೀಪ್ ಕಟೌಟ್‍ಗೆ ಅಭಿಮಾನಿಗಳು ಮೇಕೆ ಬಲಿಕೊಟ್ಟು ರಕ್ತದ ಅಭಿಷೇಕ ಮಾಡಿ ಕೌರ್ಯ ಮೆರೆದಿದ್ದಾರೆ.ಅಭಿಮಾನಿಗಳು ಮಾರಕಾಸ್ತ್ರಗಳನ್ನು ಬಳಸಿ ಮೇಕೆ ಬಲಿಕೊಟ್ಟು ರಕ್ತದ ಅಭಿಷೇಕ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನೆಲಮಂಗಲದ ವಲಯದಲ್ಲಿ ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.ಅಭಿಮಾನಿಗಳ ಈ ವರ್ತನೆ ನೋಡಿ ಶಿವಣ್ಣ ಹಾಗೂ ಸುದೀಪ್ ಅಭಿನಯದ ‘ದಿ ವಿಲನ್’ ಸಿನಿಮಾ ತಾರಕಕ್ಕೇರುತ್ತಿದ್ದೀಯಾ ಎಂಬ ಪ್ರಶ್ನೆ ಶುರುವಾಗಿದೆ. ಶಿವಣ್ಣ ಹಾಗೂ ಸುದೀಪ್ ಅಭಿಮಾನಿಗಳ ನಡುವಿನ ಸಮರದ ಸಂಭ್ರಮ ಇದೇನಾ ಎಂದು ಜನರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಿದ್ದಾರೆ. ಅಭಿಮಾನಿಗಳು ತಾಲಿಬಾನ್ ರೀತಿಯಲ್ಲಿ ಕೌರ್ಯ ಮೆರೆದಿದ್ದಾರೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸದ್ಯ ದಿ ವಿಲನ್ ಚಿತ್ರ ನೋಡಲು ಮಲ್ಟಿಪ್ಲೆಕ್ಸ್ ಗಳಲ್ಲಿಯೂ ಹೌಸ್‍ಫುಲ್ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಇದೇ ಮೊದಲ ಬಾರಿಗೆ ಹಿರಿಯ ನಟ ಶಿವರಾಜ್ ಕುಮಾರ್ ಮತ್ತು ಕಿಚ್ಚ ಸುದೀಪ್ ಒಟ್ಟಾಗಿ ನಟಿಸಿದ್ದಾರೆ. ಆಮಿ ಜಾಕ್ಸನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ವಿಲನ್ ಹಾಡುಗಳು ಕಮಾಲ್ ಮಾಡಿದ್ದು, ಚಿತ್ರ ಯಶಸ್ವಿಯಾಗಿ ಮುಂದೆ ಸಾಗುತ್ತಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


