ಬೆಂಗಳೂರು: ಬಾಕ್ಸ್ ಆಫೀಸ್‍ನಲ್ಲಿ ಭರ್ಜರಿ ಸದ್ದು ಮಾಡುತ್ತಿರುವ `ದಿ ವಿಲನ್’ ಚಿತ್ರದಲ್ಲಿ ನಟ ಶಿವರಾಜ್ ಕುಮಾರ್ ಅವರಿಗೆ ಸುದೀಪ್ ಹೊಡಿದಿರುವ ದೃಶ್ಯಗಳ ವಿರುದ್ಧ ಅಭಿಮಾನಿಗಳು ಅಕ್ರೋಶ ವ್ಯಕ್ತಪಡಿಸಿದ್ದರ ಕುರಿತು ನಿರ್ದೇಶಕ ಪೇಮ್ ಸ್ಪಷ್ಟನೆ ನೀಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿರುವ ಪ್ರೇಮ್, ಸಿನಿಮಾನ ಸಿನಿಮಾ ಥರ ನೋಡಿ. ನಿಮ್ಮನ್ನ ನೋಯಿಸುವುದು ನನ್ನ ಉದ್ದೇಶವಲ್ಲ. ಶಿವಣ್ಣನ ಮುಗ್ದತೆಯನ್ನು ಆ ಸೀನ್‍ನಲ್ಲಿ ತೋರಿಸಲಾಗಿದೆ. ಆ ಸೀನ್ ನಲ್ಲಿ ಶಿವಣ್ಣ ಅವರ ಅಭಿನಯವೇ ಪ್ರಮುಖ. ಅದ್ದರಿಂದಲೇ ಅಷ್ಟು ಚೆನ್ನಾಗಿ ಮೂಡಿ ಬಂದಿದೆ. ಶಿವಣ್ಣ ಪಾತ್ರ ಒಂದೊಮ್ಮೆ ಫೈಟ್ ಮಾಡಿದ್ದರೆ, ಅಲ್ಲಿ ಅರ್ಥವೇ ಕೆಟ್ಟು ಹೋಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ‘ದಿ ವಿಲನ್’ ರಿಲೀಸ್ ದಿನವೇ ಪ್ರೇಮ್ ಕೆಂಡಾಮಂಡಲಸಿನಿಮಾ ಗೆಲ್ಲಲು ಅಭಿಮಾನಿಗಳೇ ಕಾರಣ. ನಿಮ್ಮಿಂದಲೇ ಸಿನಿಮಾ ಗೆಲುವು ಪಡೆದಿದೆ. ಬೇರೆ ಭಾಷೆಯ ಸಿನಿಮಾ ಕ್ಷೇತ್ರದ ಜನರು ತಿರುಗಿ ನೀಡುವಂತೆ ಮಾಡಿದ್ದೀರಿ. ಅದ್ದರಿಂದ ಸಿನಿಮಾವನ್ನು ಹಾಗೆಯೇ ನೋಡಿ. ಈ ಕುರಿತು ಕ್ಷಮೆ ಇರಲಿ ಎಂದು ತಿಳಿಸಿದ್ದಾರೆ. ಆದರೆ ಅಭಿಮಾನಿಗಳ ಬೇಡಿಕೆಯಾದ ಫೈಟ್ ದೃಶ್ಯ ಕತ್ತರಿ ಹಾಕುವ ಬಗ್ಗೆ ಮಾತನಾಡಿಲ್ಲ.  ಇದನ್ನೂ ಓದಿ:  ನಿರ್ದೇಶಕ ಪ್ರೇಮ್ ವಿರುದ್ಧ ತಿರುಗಿ ಬಿದ್ರು ಶಿವಣ್ಣನ ಅಭಿಮಾನಿಗಳು!ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


