ಚಿಕ್ಕಮಗಳೂರು: ಬೈಕ್ ತೊಳೆಯಲು ಕೆರೆಗೆ ಹೋದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.ಹೇಮಂತ್ (18), ವಿಜಯ್ (21), ಶಿವರಾಜ್ (14) ಮೃತ ಯುವಕರಾಗಿದ್ದು, ಆಯುಧ ಪೂಜೆಯ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7.30ರ ಸುಮಾರಿಗೆ ಗ್ರಾಮದ ಕಟ್ಟೆ ಕೆರೆಯಲ್ಲಿ ಬೈಕ್ ತೊಳೆಯಲು ಹೋಗಿದ್ದರು. ಈ ವೇಳೆ ಓರ್ವ ಯುವಕ ಕಾಲು ಜಾರಿ ಕೆರೆಯಲ್ಲಿ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಮೃತ ಮೂವರು ಯುವಕರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬೈಕ್ ಮಾತ್ರ ಕೆರೆ ಬಳಿ ನಿಂತಿರುವುದನ್ನ ಕಂಡ ಗ್ರಾಮಸ್ಥರು ವಿಚಾರಣೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಹಬ್ಬದ ದಿನದಂತೆ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿರುವ ಲಿಂಗದಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


