ಶಿವಮೊಗ್ಗ: ಕಿಚ್ಚ ಸುದೀಪ್ ಹಾಗೂ ಟಗರು ಶಿವಣ್ಣ ಅಭಿನಯದ `ದಿ ವಿಲನ್’ ಸಿನಿಮಾಕ್ಕೆ ಪ್ರದರ್ಶನಕ್ಕೆ ಚುನಾವಣಾ ನೀತಿ ಸಂಹಿತೆಯೇ ವಿಲನ್ ಆದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ.ಇಲ್ಲಿನ ಲಕ್ಷ್ಮೀ ಟಾಕೀಸ್ ನಲ್ಲಿ ವಿಲನ್ ಚಿತ್ರದ ಮಧ್ಯರಾತ್ರಿ ಪ್ರದರ್ಶನ ನಿಗದಿ ಆಗಿತ್ತು. ಅಭಿಮಾನಿ ಸಂಘದವರಿಗೆ ಟಿಕೆಟ್ ನೀಡುವ ಭರವಸೆಯನ್ನೂ ಟಾಕೀಸ್ ನವರು ನೀಡಿದ್ದರು. ಆದರೆ, ಈ ಪ್ರದರ್ಶನಕ್ಕೆ ಚುನಾವಣಾ ಆಯೋಗದ ಅನುಮತಿ ಪಡೆಯದಿರಲಿಲ್ಲ. ಈ ಕಾರಣಕ್ಕೆ ಪೊಲೀಸರು ಚಿತ್ರಪ್ರದರ್ಶನಕ್ಕೆ ಅವಕಾಶ ನೀಡಲಿಲ್ಲ.ಹೀಗಾಗಿ ಅದೂವರೆಗೂ ಮಧ್ಯರಾತ್ರಿಯೇ ಅಭಿಮಾನದ ನಟರ ಸಿನೆಮಾ ನೋಡುವ ಉಮೇದಿನಲ್ಲಿದ್ದ ಅಭಿಮಾನಿಗಳು ಆಕ್ರೋಶಗೊಂಡರು. ಅದೂವರೆಗೂ ಕಟೌಟ್ ಗೆ ಹಾರ ಹಾಕಿ, ಪಟಾಕಿ ಸಿಡಿಸಿ, ಕುಂಬಳಕಾಯಿ ಒಡೆದು, ಕರ್ಪೂರ ಹಚ್ಚಿ ಸಂಭ್ರಮದಲ್ಲಿದ್ದ ಅಭಿಮಾನಿಗಳಿಗೆ ಪೊಲೀಸರೂ ವಿಲನ್ ಗಳಾದರು. ಎಲ್ಲರನ್ನೂ ಹೊರ ಕಳಿಸಿ, ಗೇಟು ಮುಚ್ಚಿಸಿದರು. ತೀವ್ರ ನಿರಾಸೆಯಲ್ಲಿ ಅಭಿಮಾನಿಗಳು ಹಿಂತಿರುಗಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


