ಮೈಸೂರು: ಇಂದು ನಾಡಿನಾದ್ಯಂತ ಆಯುಧ ಪೂಜೆ ಹಬ್ಬವನ್ನು ಆಚರಿಸಲಾಗುತ್ತಿದೆ. ಆದರೆ ಇಂದು ಅರಮನೆಯಲ್ಲಿ ನಡೆಯುತ್ತಿದ್ದ ಪೂಜಾ ಕಾರ್ಯಕ್ರಮಗಳನ್ನು ರಾಜವಂಶಸ್ಥೆ ಪ್ರಮೋದಾದೇವಿ ಅವರು ಮೊಟಕುಗೊಳಿಸಿ ದಿಢೀರ್ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.ರಾಜವಂಶಸ್ಥೆ ವಿಶಾಲಾಕ್ಷಿ ದೇವಿಯವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಮೈಸೂರು ಅರಮನೆಯಿಂದ ದಿಢೀರ್ ಆಗಿ ಪ್ರಮೋದಾದೇವಿ ಅವರು ಬೆಂಗಳೂರಿಗೆ ಪ್ರಯಾಣ ಕೈಗೊಂಡಿದ್ದಾರೆ. ವಿಶಾಲಕ್ಷಿದೇವಿ ಅವರು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸಹೋದರಿಯಾಗಿದ್ದು, ಸಂಬಂಧದಲ್ಲಿ ಪ್ರಮೋದಾದೇವಿ ಒಡೆಯರ್ ಅವರಿಗೆ ನಾದಿನಿಯಾಗಬೇಕು. ಆದ್ದರಿಂದ ನಾದಿನಿ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಹೊರಟಿದ್ದಾರೆ.ವಿಶಾಲಾಕ್ಷಿ ದೇವಿಯವರಿಗೆ ತೀವ್ರ ಅನಾರೋಗ್ಯದ ವಿಚಾರ ತಿಳಿದು ಆಯುಧ ಪೂಜಾ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಪ್ರಮೋದಾದೇವಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಈ ಬಾರಿಯ ದಸರಾ ಆಚರಣೆಗಳಲ್ಲೂ ರಾಜಮನೆತನ ಸರಳತೆಯನ್ನು ಕಾಯ್ದುಕೊಂಡಿದೆ. ವಿಶಾಲಾಕ್ಷಿದೇವಿಯವರ ಅನಾರೋಗ್ಯದ ಹಿನ್ನೆಲೆಯಲ್ಲಿ ಸರಳವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


