ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ.ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಶಿವಣ್ಣ ಗುಣಮುಖರಾಗಿದ್ದರು. ಬ್ಯಾಕ್ ಟೂ ಬ್ಯಾಕ್ ಸಿನಿಮಾ ಶೂಟಿಂಗ್‍ನಲ್ಲಿ ತೊಡಗಿಸಿಕೊಂಡಿದ್ದರಿಂದ ಶಿವರಾಜ್‍ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಭಾನುವಾರ ಮಧ್ಯರಾತ್ರಿಯೇ ಕುಟುಂಬಸ್ಥರು ಶಿವರಾಜ್‍ಕುಮಾರ್ ಮಲ್ಯ ಆಸ್ಪತ್ರೆಗೆ ದಾಖಲಿಸಿದ್ದರು.ಶಿವರಾಜ್ ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ತಮ್ಮ ಪತ್ನಿ ಜೊತೆ ಬಂದು ಸಹೋದರನ ಆರೋಗ್ಯದ ಬಗ್ಗೆ ವಿಚಾರಿಸಿದ್ದರು. ಅಲ್ಲದೇ ನಟ ವಿನಯ್ ರಾಜ್ ಕುಮಾರ್ ತಮ್ಮ ದೊಡ್ಡಪ್ಪನ ಆರೋಗ್ಯವನ್ನು ವಿಚಾರಿಸಿದ್ದರು. ನಿರ್ದೇಶಕ ಪ್ರೇಮ್ ಹಾಗೂ ಶಿವಣ್ಣ ಪುತ್ರಿ ನಿವೇದಿತಾ ಆಸ್ಪತ್ರೆಗೆ ಭೇಟಿ ನೀಡಿದ್ದರು.ಶಿವರಾಜ್‍ಕುಮಾರ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್ ರಾಜ್‍ಕುಮಾರ್, ಶಿವಣ್ಣನಿಗೆ ಏನು ಆಗಿಲ್ಲ. ಸ್ವಲ್ಪ ಜ್ವರ ಹೆಚ್ಚಾಗಿರೋದ್ರಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈಗ ಜ್ವರ ಕಡಿಮೆಯಾಗಿದೆ. ಡಿಸ್ಚಾರ್ಜ್ ಬಗ್ಗೆ ಇನ್ನು ಆಸ್ಪತ್ರೆಯಲ್ಲಿ ಏನೂ ಹೇಳಿಲ್ಲ. ಸಂಜೆಯೊಳಗೆ ಡಿಸ್ಚಾರ್ಜ್ ಆಗೋ ಸಾಧ್ಯತೆಯಿದೆ ಎಂದು ತಿಳಿಸಿದ್ದರು.ಶಿವಣ್ಣ ಅವರಿಗೆ ಏನೂ ಆಗಿಲ್ಲ. ಅವರಿಗೆ ವೈರಲ್ ಜ್ವರ ಬಂದಿದ್ದು, ಡ್ರಿಪ್ಸ್ ನೀಡುತ್ತಿದ್ದಾರೆ. ಮನೆಯಲ್ಲಿ ಡ್ರಿಪ್ಸ್ ಹಾಕಲು ಆಗದಿರುವ ಕಾರಣ ಅವರು ಆಸ್ಪತ್ರೆಗೆ ಬರುವ ಅನಿವಾರ್ಯ ಬಂತು. ಶಿವಣ್ಣ ಕ್ಷೇಮವಾಗಿದ್ದಾರೆ ಎಂದು ನಿರ್ದೇಶಕ ಪ್ರೇಮ್ ಹೇಳಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


