ಉಡುಪಿ: ಕಲೆ ಸಾಹಿತ್ಯ ಅಂತ ಮೂರು ಹೊತ್ತು ತೊಡಗಿಸಿಕೊಂಡಿದ್ದವ ನೇಣಿಗೆ ಶರಣಾಗಿ ಎಲ್ಲರಲ್ಲೂ ಆತಂಕ ಸೃಷ್ಟಿ ಮಾಡಿದ್ದಾನೆ. ತನ್ನ ಸಾವಿಗೆ ಉಗ್ರ ಸಂಘಟನೆಯೇ ಕಾರಣ ಅನ್ನೋ ಡೆತ್ ನೋಟ್ ಮತ್ತಷ್ಟು ಚರ್ಚೆಗೆ ಕಾರಣವಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ನಡೆದಿದೆ.ಕುಂದಾಪುರದ 23 ವರ್ಷದ ವಿವೇಕ್ ಯಾವ ಸಂಘಟನೆಗೂ ಸೇರದೆ ದೇಶಭಕ್ತಿ ಬೆಳೆಸಿಕೊಂಡಿದ್ದನು. ಆದರೆ ಏನಾಯ್ತೋ ಏನೋ ಕಳೆದ ರಾತ್ರಿ ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಪತ್ರದಲ್ಲಿ ಉಗ್ರ ಸಂಘಟನೆಯ ಬಗ್ಗೆ ಉಲ್ಲೇಖಿಸಿದ್ದು, ಸದ್ಯ ಚರ್ಚೆಯ ವಿಷಯವಾಗಿದೆ. ನೇಣು ಹಾಕಿಕೊಂಡು ಸಾಯಲು ಕಾರಣಗಳೂ ಇರಲಿಲ್ಲ. ಆದರೆ ಕಳೆದ ರಾತ್ರಿ ಮನೆಯಲ್ಲೇ ನೇಣು ಬಿಗಿದು ಸಾವನ್ನಪ್ಪಿದ್ದಾನೆ.ಡೆತ್ ನೋಟ್‍ನಲ್ಲಿ ಏನಿದೆ?
ನನ್ನ ಸಾವಿಗೆ ಉಗ್ರ ಸಂಘಟನೆಯೇ ಕಾರಣ. ಮನೆಮಂದಿಗೂ ಅವರಿಂದ ಅಪಾಯವಾಗುವ ಸಾಧ್ಯತೆಯಿದೆ. ಈ ಹಿಂದೆ ಅವರಿಂದ ನನಗೆ ಕೊಲೆ ಬೆದರಿಕೆಯಿತ್ತು. ಎರಡು ವರ್ಷದ ಹಿಂದೆ ಆಕಸ್ಮಿಕವಾಗಿ ಪರಿಚಯವಾದ ಸಂಘಟನೆ ಅದಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅವರ ಅಸ್ತಿತ್ವವಿದೆ. ಮೊಬೈಲ್ ಬಳಸದ ಆ ಸಂಘಟನೆ ಬಗ್ಗೆ ಅನುಮಾನ ಬಂದು ಹಲವು ಮಾಹಿತಿ ಕಲೆ ಹಾಕಿದ್ದು ಅದು ಅವರಿಗೆ ತಿಳಿದು ತನಗೆ ಕೊಲೆ ಬೆದರಿಕೆ ಹಾಕಿದ್ದರು. ಅವರಿಗೆ ರಾಜಕೀಯ ಬೆಂಬಲವೂ ಇದೆ. ನಾನು ಸಂಗ್ರಹಿಸಿದ ದಾಖಲೆಗಳು, ಫೋಟೋಗಳನ್ನು ಪೊಲೀಸರಿಗೆ, ಮಾಧ್ಯಮಕ್ಕೆ ನೀಡುವ ಆಲೋಚನೆಯಲ್ಲಿದ್ದು, ಆಗಸ್ಟ್ ತಿಂಗಳಿನಲ್ಲಿ ಆ ಮೊಬೈಲ್ ಕಳೆದುಹೋಗಿದೆ.ಇನ್ನೊಂದು ಮೆಮೊರಿ ಚಿಪ್‍ನಲ್ಲಿ ಒಂದಷ್ಟು ದಾಖಲೆಗಳಿದ್ದು ಆ ಚಿಪ್ ಕೂಡ ಸಿಕ್ಕಿಲ್ಲ. ತನಗೆ ಅವರು ಬಹಳಷ್ಟು ಹಿಂಸೆ ನೀಡಿದ್ದು, ಅವರಿಂದ ತಪ್ಪಿಸಿಕೊಳ್ಳುವಪ್ರಯತ್ನ ಮಾಡಿದರೂ ನನ್ನಿಂದ ಅಸಾಧ್ಯವಾಗಿತ್ತು. ಇವರಿಂದ ನನ್ನ ಮನೆಯವರನ್ನು ಉಳಿಸಿಕೊಳ್ಳಲು ನನ್ನ ಸಾವು ದಾರಿಯೆಂದು ಭಾವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ದೇಹವನ್ನು ದಾನ ಮಾಡಿ. ಮನೆಯವರು ಒಪ್ಪದಿದ್ದಲ್ಲಿ ಕಣ್ಣು ದಾನವಾದರೂ ಮಾಡಿ. ದೇಹವನ್ನು ಅಗ್ನಿಸ್ಪರ್ಷ ಮಾಡುವ ಬದಲು ಮನೆಯ ತೋಟದಲ್ಲಿ ಹೂಳಿರಿ ಇದು ನನ್ನ ಕೊನೆಯಾಸೆ. ಜಾತಿ, ಹಣ, ಅಹಂಕಾರ, ರಾಜಕೀಯ, ಸ್ವಾರ್ಥ, ಅಧಿಕಾರ ಬಿಟ್ಟು ಎಲ್ಲರೂ ಮನುಷ್ಯರಾಗಿ ಬದುಕಿ ದೇಶವನ್ನು ಸ್ವಾರ್ಥಕ್ಕಾಗಿ ಬಲಿಕೊಡಬೇಡಿ ಎಂಬ ವಾಕ್ಯದೊಂದಿಗೆ ಡೆತ್ ನೋಟ್ ಮುಗಿಸಿದ್ದಾನೆ.ಮೂರು ಪುಟಗಳ ಡೆತ್‍ನೋಟ್ ನಲ್ಲಿರುವ ವಿಚಾರದ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣ ಭೇದಿಸಲು ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿದೆ. ಎಲ್ಲಾ ಆಯಾಮಗಳಲ್ಲಿ ತನಿಖೆ ಶುರು ಮಾಡಿದ್ದೇವೆ. ಆತನ ಗೆಳೆಯರು, ಸಂಬಂಧಿಕರು ಮನೆಯವರಿಂದ ಮಾಹಿತಿ ಕಲೆ ಹಾಕುತ್ತಿದ್ದೇವೆ. ಇದರ ಜೊತೆ ತಜ್ಞರನ್ನು ಭೇಟಿ ಮಾಡಿದ್ದೇವೆ. ಪತ್ರದ ಬಗ್ಗೆ ಕೂಡ ಕೂಲಂಕುಶ ತನಿಖೆ, ವೈದ್ಯರ ಅಭಿಪ್ರಾಯ ಪಡೆಯಲಾಗುವುದು ಅಂತ ಎಸ್‍ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv






 Advertisement 




ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


