ಬೆಂಗಳೂರು: ಪ್ರೇಮ ವೈಫಲ್ಯವಾದರೆ ಪಾಗಲ್ ಪ್ರೇಮಿಗಳು ಎಂತಹ ಕೃತ್ಯಕ್ಕೆ ಬೇಕಾದರೂ ಇಳಿಯುತ್ತಾರೆ. ಇಂತಹದ್ದೇ ಪ್ರಕರಣವೊಂದು ಬೆಂಗಳೂರು ಹೊರ ವಲಯದ ಆನೇಕಲ್‍ನಲ್ಲಿ ನಡೆದಿದ್ದು, ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರಿಯತಮೆ ಕತ್ತು ಕೊಯ್ದು ಹತ್ಯೆಗೆ ಯತ್ನಿಸಿದ್ದಾನೆ.ಬೆಳ್ಳಂದೂರು ನಿವಾಸಿ ಗಿರೀಶ್ ಕೃತ್ಯ ಎಸಗಿದ ಪಾಗಲ್ ಪ್ರೇಮಿ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಕೆಯನ್ನು ಆನೇಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.ಆಗಿದ್ದೇನು?: ಯುವತಿಯ ಮನೆಯಲ್ಲಿ ಆಕೆಯನ್ನು ಬಿಟ್ಟು ಬೇರೆ ಯಾರೂ ಇಲ್ಲವೆಂದು ಗಿರೀಶ್ ಇಂದು ಬೆಳಗ್ಗೆ ಖಚಿತ ಪಡೆಸಿಕೊಂಡಿದ್ದಾನೆ. ಬಳಿಕ ಮನೆಗೆ ನುಗ್ಗಿದ ಗಿರೀಶ್ ಯುವತಿಯನ್ನು ಹಿಡಿದು, ಕತ್ತು ಕೊಯ್ದು ಹತ್ಯೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ಜೋರಾಗಿ ಕಿರುಚಾಡಿದ್ದಾಳೆ. ಇದನ್ನು ನೆರೆಹೊರೆಯವರು ಕೇಳಿಸಿಕೊಂಡಿದ್ದು, ತಕ್ಷಣವೇ ಯುವತಿಯ ಮನೆ ಕಡೆಗೆ ಬಂದಿದ್ದಾರೆ. ಇದನ್ನು ನೋಡಿದ ಗಿರೀಶ್ ಅಲ್ಲಿಂದ ಕಾಲ್ಕಿತ್ತಿದ್ದಾನೆ.ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಯುವತಿಯನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಪಾಗಲ್ ಪ್ರೇಮಿ ಗಿರೀಶ್ ವಿರುದ್ಧ ಆನೇಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


