ಹಾವೇರಿ: ಜಿಲ್ಲಾ ಪಂಚಾಯ್ತಿ ಸಿಇಓ ಪ್ರಯಾಣಿಸುತ್ತಿದ್ದ ಕಾರ್ ಪಲ್ಟಿಯಾಗಿದ್ದು, ಸಿಇಓ ಸೇರಿ ನಾಲ್ವರು ಗಾಯಗೊಂಡ ಘಟನೆ ಹಾವೇರಿ ನಗರದ ಹೊರವಲಯದಲ್ಲಿರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಬಳಿ ನಡೆದಿದೆ.ಅಪಘಾತದಲ್ಲಿ ಗಾಯಗೊಂಡರನ್ನ ಸಿಇಓ ಶಿಲ್ಪಾ ನಾಗ್, ಸಿಇಓ ಪುತ್ರ ರಿಷಿ, ಅರ್ಚನಾ ಪಿಳ್ಳೆ ಮತ್ತು ವಿಶ್ವನಾಥ್ ಎಂದು ಗುರುತಿಸಲಾಗಿದೆ. ಸ್ವಂತ ಕಾರಿನಲ್ಲಿ ಶಿಲ್ಪಾ ನಾಗ್ ಪ್ರಯಾಣಿಸುತ್ತಿದ್ದು, ಇವರು ದೇವಗಿರಿ ಗ್ರಾಮದ ಬಳಿ ಇರುವ ನಿವಾಸದ ಕಡೆಯಿಂದ ಬರುತ್ತಿದ್ದರು. ಈ ವೇಳೆ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಕಾರ್ ಚಾಲಕಿಯ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಅಪಘಾತದಲ್ಲಿ ಗಾಯಗೊಂಡು ಗಾಯಾಳುಗಳನ್ನ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರನ್ನ ಶಿಲ್ಪಾ ನಾಗ್ ಸ್ನೇಹಿತೆ ಅರ್ಚನಾ ಎಂಬವರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಘಟನೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


