ದಾವಣಗೆರೆ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ಆಸ್ಪತ್ರೆಗೆ ಸಾಗಿಸಿ ಹರಿಹರದ ಶಾಸಕ ಎಸ್ ರಾಮಪ್ಪ ಮಾನವೀಯತೆ ಮೆರೆದಿದ್ದಾರೆ.ಶುಕ್ರವಾರ ತಡರಾತ್ರಿ ದಾವಣಗೆರೆಯ ಹರಿಹರ ಪಟ್ಟಣದ ವಿದ್ಯಾನಗರ ಬಳಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕಿನಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಬರುತ್ತಿದ್ದ ಶಾಸಕ ರಾಮಪ್ಪ, ರಕ್ತದ ಮಡುವಿನಲ್ಲಿ ಬಿದ್ದಿದ್ದ ದಂಪತಿಗಳನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ರವಾನಿಸಿದ್ದಾರೆ.ಬೈಕ್ ನಲ್ಲಿದ್ದ ವನಿತಾ ಹಾಗೂ ಲಿಂಗರಾಜು ಅವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಲಿಂಗರಾಜು ಸಾವನ್ನಪ್ಪಿದ್ದಾರೆ. ಪತ್ನಿ ವನಿತಾ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹರಿಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


