ಬೆಂಗಳೂರು: ನೋಡ ನೋಡುತ್ತಿದಂತೆಯೇ ಓಮ್ನಿ ಕಾರು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನೆಲಮಂಗಲ ತಾಲೂಕಿನ ಚಿಕ್ಕಮಾರನಹಳ್ಳಿ ಬಳಿ ನಡೆದಿದ್ದು, ಕಾರು ಚಾಲಕ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.ಓಮ್ನಿ ಕಾರ್ ಹೊಸಪಾಳ್ಯ ಗೇಟ್ ನಿವಾಸಿ ಮಂಜು ಎಂಬವರಿಗೆ ಸೇರಿದ್ದಾಗಿದ್ದು, ಚಲಾಯಿಸುತ್ತಿರುವ ವೇಳೆಯೇ ಕ್ಷಣಾರ್ಧದಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ಎಚ್ಚೆತ್ತು ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಹೊರ ಬಂದಿದ್ದಾರೆ. ಈ ಮೂಲಕ ಭಾರೀ ಅನಾಹುತದಿಂದ ಪಾರಾಗಿದ್ದಾರೆ. ಬಳಿಕ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


