ಕಲಬುರಗಿ: ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ದೇವಾಪುರ ತಾಂಡದಲ್ಲಿ ನಡೆದಿದೆ.19 ವರ್ಷದ ಯುವತಿ ಮೇಲೆ ನೆರೆಮನೆಯ ಆರೋಪಿ ಸುನೀಲ್ ಜಾಧವ್ ಈ ಪೈಶಾಚಿಕ ಕೃತ್ಯ ಎಸಗಿದ್ದಾನೆ. ಸದ್ಯಕ್ಕೆ ಆರೋಪಿ ಸುನೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.ಸಂತ್ರಸ್ತೆ ಅನಾರೋಗ್ಯ ಪೀಡಿತ ಅಜ್ಜಿಯೊಂದಿಗೆ ವಾಸವಾಗಿದ್ದಳು. ರಾತ್ರಿ ಯುವತಿ ಅಜ್ಜಿಯ ಸೇವೆ ಮಾಡುತ್ತಿದ್ದಾಗ ಆರೋಪಿ ಸುನೀಲ್ ಏಕಾಏಕಿ ಮನೆಗೆ ನುಗ್ಗಿ ಸಂತ್ರಸ್ತೆಯ ಕೈಕಾಲು ಕಟ್ಟಿ ಹಾಕಿದ್ದಾನೆ. ಬಳಿಕ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.ಈ ಘಟನೆಯ ನಂತರ ಯುವತಿಯನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


