ದಾವಣಗೆರೆ: ಜಿಲ್ಲೆಯ ಹೊರ ವಲಯದಲ್ಲಿರುವ ಕರೂರು ಗ್ರಾಮದ ಜಮೀನೊಂದರಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ದಾವಣಗೆರೆ ತಾಲೂಕಿನ ಕಕ್ಕರಗೊಳ್ಳ ಗ್ರಾಮದ ನಿವಾಸಿಯಾದ ರಂಜಿತಾ (23) ಮೃತಪಟ್ಟಿರುವ ಯುವತಿ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಯುವತಿಯ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ರಂಜಿತಾ ದಾವಣಗೆರೆಯಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ರಂಜಿತಾ ನಿನ್ನೆ ಕೆಲಸಕ್ಕೆಂದು ಹೋಗಿದ್ದಳು. ಮತ್ತೆ ಕೆಲಸ ಮುಗಿಸಿಕೊಂಡು ವಾಪಸ್ ಮನೆಗೆ ಬಂದಿರಲಿಲ್ಲ. ಆದ್ರೆ ಇಂದು ಶವವಾಗಿ ರಂಜಿತಾ ಪತ್ತೆಯಾಗಿದ್ದಾಳೆ.ಈ ಘಟನೆ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯುವತಿಯನ್ನು ಯಾರೋ ಅತ್ಯಾಚಾರ ಮಾಡಿ ಜಮೀನಿನಲ್ಲಿಯೇ ಕೊಲೆ ಮಾಡಿ ಹೋಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ತನಿಖೆಯ ನಂತರ ಯುವತಿಯ ಸಾವಿಗೆ ನಿಖರ ಕಾರಣ ತಿಳಿದು ಬರಬೇಕಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


