ಬೆಂಗಳೂರು: ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ.ಆರ್ ಸ್ವಾಮಿಯನ್ನು ಅಮಾನತು ಮಾಡಲಾಗಿದೆ.ಕಳೆದ ವಾರ ಎಸಿಬಿ ತಂಡ ಕೆಐಎಡಿಬಿಯ ಚೀಫ್ ಎಂಜಿನಿಯರ್ ಟಿ.ಆರ್.ಸ್ವಾಮಿ ಹಾಗೂ ಬಿಡಿಎ ಅಧೀಕ್ಷಕ ಅಭಿಯಂತರ ಎನ್.ಜಿ.ಗೌಡಯ್ಯ ಅವರ ಇಬ್ಬರು ಅಧಿಕಾರಿಗಳ ಮನೆ, ಕಚೇರಿ, ಕುಟುಂಬಸ್ಥರ ಮನೆಗಳ ಮೇಲೆ ದಾಳಿ ಮಾಡಿತ್ತು. ಈ ವೇಳೆ ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಇದನ್ನೂ ಓದಿ: ಇಬ್ಬರು ಭ್ರಷ್ಟ ಅಧಿಕಾರಿಗಳ ಬಳಿಯಿದೆ ಕೋಟ್ಯಂತರ ಆಸ್ತಿ: ಯಾರ ಬಳಿ ಎಷ್ಟು ಆಸ್ತಿ?ದಾಳಿ ಮಾಡಿದ ಬಳಿಕ ಎಸಿಬಿ ಅಧಿಕಾರಿಗಳು ಮಂಗಳವಾರ ರಾಜ್ಯ ಸರ್ಕಾರಕ್ಕೆ ಪತ್ರ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಎಸಿಬಿ ಮಾಡಿದ್ದ ಶಿಫಾರಸ್ಸು ಆಧರಿಸಿ ಟಿ.ಆರ್ ಸ್ವಾಮಿಯನ್ನು ಅಮಾನತು ಮಾಡಲಾಗಿದ್ದು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತರಿಂದ ಅಮಾನತು ಆದೇಶ ಹೊರಡಿಸಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ KIADB, BDA, ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ – ಅಧಿಕಾರಿಗಳನ್ನು ನೋಡ್ತಿದ್ದಂತೇ ಕಂತೆಕಂತೆ ನೋಟುಗಳ ಬ್ಯಾಗ್ ಬಿಸಾಕಿದ್ರು!ಮಾಹಿತಿ ಮೆರೆಗೆ ಎಸಿಬಿ ಅಧಿಕಾರಿಗಳು ಇಬ್ಬರು ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದ್ದರು. ಆದರೆ ಎಸಿಬಿ ಅಧಿಕಾರಿಗಳು ರೇಡ್ ಮಾಡುವುದನ್ನು ಮೊದಲೇ ತಿಳಿದ ಟಿ.ಆರ್ ಸ್ವಾಮಿ ಬಾಗಿಲು ತೆಗೆಯದೇ ಡ್ರಾಮಾ ಮಾಡಿದ್ರು. ಆದ್ರೂ ಪಟ್ಟು ಬಿಡದ ಎಸಿಬಿ ಅಧಿಕಾರಿಗಳು ಬಲವಂತವಾಗಿ ಬಾಗಿಲು ತೆಗೆಸಿ ಪರಿಶೀಲನೆ ನಡೆಸಿದಾಗ ಕೋಟಿ ಕೋಟಿ ದುಡ್ಡು ಸಿಕ್ಕಿತ್ತು.  ಇದನ್ನೂ ಓದಿ: ಎಸಿಬಿ ದಾಳಿ ವೇಳೆ ಪಾರ್ಕಿಂಗ್ ಕಾರಿನಲ್ಲಿ ಹಣ, ಪೈಪಿನಲ್ಲಿ ಚಿನ್ನ ಪತ್ತೆ!ಮನೆಯಲ್ಲಿ ಏನೇನು ಸಿಕ್ಕಿದೆ?
ಸ್ವಾಮಿ ಅವರ ಕುಟುಂಬಸ್ಥರ ಮತ್ತು ಸಂಬಂಧಿಕರ ಹೆಸರಿನಲ್ಲಿ 8 ಮನೆ, 10 ನಿವೇಶನಗಳು, ವಿವಿಧೆಡೆ 10 ಎಕರೆ ಕೃಷಿ ಜಮೀನು, 1.6 ಕೆಜಿ ಚಿನ್ನ, 3 ಕಾರು, 4.52 ಕೋಟಿ ರೂ ಪತ್ತೆಯಾಗಿತ್ತು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


