ತುಮಕೂರು: ಹಾಲು ಒಕ್ಕೂಟದ ಚುನಾವಣಾ ಕಣದ ಗಲಾಟೆಯಲ್ಲಿ ದುಷ್ಕರ್ಮಿಗಳು ಹಾಲು ಉತ್ಪಾದಕ ಸಂಘದ ಮಹಿಳಾ ಕಾರ್ಯದರ್ಶಿಯನ್ನೇ ಕಿಡ್ನಾಪ್ ಮಾಡಿರುವ ಘಟನೆ ಶಿರಾ ತಾಲೂಕಿನ ಯಲದಬಾಗಿಯಲ್ಲಿ ಘಟನೆ ನಡೆದಿದೆ.ಬೆಳಗ್ಗೆ 9 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಹಾಲು ಉತ್ಪಾದಕರ ಸಂಘದ ಚುನಾವಣೆ ವಿಚಾರವಾಗಿ ನಡೆದ ಗಲಾಟೆಯಿಂದಾಗಿ ಗ್ರಾಮದ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಅನ್ನಪೂರ್ಣಮ್ಮ ಅವರನ್ನು ಪುಂಡರು ಎಳೆದೊಯ್ದಿದ್ದಾರೆ.ಇಂದೇ ತಿಂಗಳು 30 ರಂದು ಯಲದಬಾಗಿ ಗ್ರಾಮದ ಹಾಲು ಉತ್ಪಾದಕರ ಸಂಘಕ್ಕೆ ಚುನಾವಣೆ ಘೋಷಣೆಯಾಗಿದೆ. ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಅನ್ನಪೂರ್ಣಮ್ಮ ಅವರು ಜೆಡಿಎಸ್ ಮುಖಂಡರಿಗೆ ಬೆಂಬಲ ನೀಡಿದ್ದರು ಎನ್ನುವ ಆರೋಪ ಕೇಳಿಬಂದಿದೆ. ಬಹಿರಂಗವಾಗಿಯೇ ಬೆಂಬಲ ನೀಡುತ್ತಿರುವುದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿಗರು ಆಕ್ರೋಶಗೊಂಡಿದ್ದರು.ಹಾವಿನಾಳು ಹಾಗೂ ಯಲದಬಾಗಿ ಗ್ರಾಮದ ರಂಗನಾಥ್, ನವೀನ್, ಆನಂದ್, ಗುರುಪ್ರಸಾದ್ ಕಿಡ್ನಾಪ್ ಮಾಡಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ. ಕಿಡ್ನಾಪ್ ಆಗುತ್ತಿರುವ ದೃಶ್ಯವನ್ನು ಗ್ರಾಮಸ್ಥರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


