ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಸಿನಿಮಾ ಛಾಯಾಗ್ರಾಹಕ ಕೆ.ಎಂ.ವಿಷ್ಣುವರ್ಧನ್ ಕೊನೆಯುಸಿರೆಳೆದಿದ್ದಾರೆ.ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ. ತುಮಕೂರಿನ ಕುದೂರಿನಲ್ಲಿ ವಿಷ್ಣುವರ್ಧನ್ ಅವರ ಅಂತ್ಯಸಂಸ್ಕಾರ ಭಾನುವಾರ ಸಂಜೆ ನೆರವೇರಿತು.ವಿಷ್ಣುವರ್ಧನ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ತಾಂತ್ರಿಕ ವರ್ಗ ಸಂತಾಪ ಸೂಚಿಸಿದೆ. ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ಕ್ಯಾಮೆರಾ ನಿರ್ದೇಶಕರಾಗಿ ಕೆ.ಎಂ.ವಿಷ್ಣುವರ್ಧನ್ ಕೆಲಸ ಮಾಡಿದ್ದರು. ಕಿಚ್ಚ ಸುದೀಪ್ ಅಭಿನಯದ ಹುಬ್ಬಳ್ಳಿ, ಹ್ಯಾಟ್ರಿಕ್ ಹಿರೋ ಶಿವಣ್ಣನ ನಟನೆಯ ಸುಗ್ರೀವ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯೋಧ, ರಾಕಿಂಗ್ ಸ್ಟಾರ್ ಯಶ್‍ನ ರಾಜಾಹುಲಿ ಸೇರಿದಂತೆ ಕನ್ನಡದ ಅನೇಕ ಚಿತ್ರಗಳಿಗೆ ಕ್ಯಾಮೆರಾ ಕೈಚಳಕ ತೋರಿದ್ದಾರೆ.ಓಂಪ್ರಕಾಶ್ ರಾವ್ ನಿರ್ದೇಶನದ ಬಹುತೇಕ ಸಿನಿಮಾಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿರುವ ವಿಷ್ಣುವರ್ಧನ್, ಸುನಿಲ್ ಕುಮಾರ್ ದೇಸಾಯಿಯವರ ಮುಂಬರುವ ಉದ್ಘರ್ಷ ಸಿನಿಮಾಗೆ ಛಾಯಗ್ರಾಹಕರಾಗಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


