ರಾಮನಗರ: ನಾನೇ ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ. ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದೆ ಎಂದು ಅನಿತಾ ಕುಮಾರಸ್ವಾಮಿಯವರು ರಾಮನಗರದಲ್ಲಿ ಇಂದು ತಿಳಿಸಿದ್ದಾರೆ.ರಾಮನಗರ ತಾಲೂಕಿನ ಮೊಟ್ಟೆದೊಡ್ಡಿಯಲ್ಲಿ ನಿಧನರಾಗಿದ್ದ ಜೆಡಿಎಸ್ ಮುಖಂಡ ಪುಟ್ಟಲಿಂಗಯ್ಯನವರ ಕುಟುಂಬಕ್ಕೆ ಸಾಂತ್ವಾನ ಹೇಳಲು ಭೇಟಿ ನೀಡಿದ್ದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ನಿಲ್ಲಲಿ ನಾವು ತಲೆಕೆಡಿಸಿಕೊಂಡಿಲ್ಲ ಎಂದು ಹೇಳಿದರು.ರಾಮನಗರದ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಖಚಿತವಾಗಿದ್ದು, ರಾಮನಗರ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿ ತಾವೇ ಆಗಿದ್ದು, ಇನ್ನೆರಡು ದಿನಗಳಲ್ಲಿ ಪಕ್ಷದ ವರಿಷ್ಠರು ಅಂತಿಮವಾಗಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


