ಚಿಕ್ಕಮಗಳೂರು: ಕೆಟ್ಟು ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಬೆಟ್ಟದಹಳ್ಳಿ ಬಳಿ ನಡೆದಿದೆ.ಇಂದು ಬೆಳಗಿನ ಜಾವ 5.30ರ ಸುಮಾರಿಗೆ ರಾಜ್ಯ ಹೆದ್ದಾರಿ 206ರಲ್ಲಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ ಬೆಟ್ಟದಹಳ್ಳಿ ಬಳಿ ಕೆಟ್ಟು ನಿಂತಿತ್ತು. ಈ ವೇಳೆ ಇದೇ ಮಾರ್ಗವಾಗಿ ವೇಗವಾಗಿ ಬಂದ ಖಾಸಗಿ ಬಸ್ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್‍ಗೆ ಗುದ್ದಿದೆ. ಬಸ್ ಗುದ್ದಿದ ಪರಿಣಾಮ ಬಸ್‍ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಕೂಡಲೇ ತರೀಕೆರೆ ತಾಲೂಕಿನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


