ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೊದಲ ದಿನವೇ ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣನ ಅಬ್ಬರ ಶುರುವಾಗಿದೆ. ನಗರದ ವಿವಿಧೆಡೆ ಧಾರಾಕಾರ ಮಳೆ ಸುರಿದಿದ್ದು, ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡು ಸವಾರರು ಪರದಾಡಿದ್ದಾರೆ.ಬೆಂಗಳೂರಿನ ಸದಾಶಿವನಗರ, ಶಿವಾಜಿನಗರ, ಹೆಬ್ಬಾಳ, ವಸಂತನಗರ, ಕೋಲ್ಸ್ ಪಾರ್ಕ್, ಯಶವಂತಪುರ, ಲಾಲ್ ಬಾಗ್, ಕಾರ್ಪೋರೇಷನ್ ಹಾಗೂ ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಮಳೆಯಾಗಿದೆ. ರಸ್ತೆಯ ಮೇಲೆ ನೀರು ನಿಂತು, ಸವಾರರು ಹರಸಾಹಸ ಪಡಬೇಕಾಯಿತು.ಬೆಂಗಳೂರು ಸೇರಿದಂತೆ ಹಲವೆಡೆ ಅಕ್ಟೋಬರ್ 6 ರಿಂದ ಭಾರಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಹವಾಮಾನ ಇಲಾಖೆ ತಿಳಿಸಿದ ಮೊದಲ ದಿನದಂದೇ ವರುಣ ತನ್ನ ಆರ್ಭಟ ಮೆರೆದಿದ್ದಾನೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


