ಮಂಡ್ಯ: ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಉಪಚುನಾವಣೆ ದಿನಾಂಕ ಪ್ರಕಟಿಸಿದ ಬೆನ್ನಲ್ಲೇ ಮಂಡ್ಯ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ತಾನು ಮಂಡ್ಯ ಲೋಕಸಭೆಯ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಎಂದು ಎಲ್.ಆರ್ ಶಿವರಾಮೇಗೌಡ ತಿಳಿಸಿದ್ದಾರೆ.ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದು, ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಅವರು ನನಗೆ ಪಕ್ಷದ ವತಿಯಿಂದ ಉತ್ತಮ ಅವಕಾಶ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಾನು ಟಿಕೆಟ್ ಕೇಳಿದ್ದೇನೆ ಎಂದು ತಿಳಿಸಿದರು.ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ವೇಳೆ ಉಪಚುನಾವಣೆ ನಡೆಸುತ್ತಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಸಮಯದಲ್ಲಿ ಚುನಾವಣೆ ಅಗತ್ಯವಿರಲಿಲ್ಲ. ಇದರಿಂದ ಜನರ ತೆರಿಗೆ ಹಣ ವ್ಯರ್ಥವಾಗುತ್ತದೆ. 6 ತಿಂಗಳ ಹಿಂದೆಯೇ ಚುನಾವಣೆ ನಡೆಯುವ ನಿರೀಕ್ಷೆ ಇತ್ತು. ಆದರೆ ಇಂದು ಚುನಾವಣೆ ಘೋಷಣೆಯಾಗಿದ್ದು ಪಕ್ಷದ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ. ಈ ಕುರಿತು ವರಿಷ್ಠರೊಂದಿಗೆ ಮಾತನಾಡಲು ಬೆಂಗಳೂರಿಗೆ ಹೋಗುತ್ತಿದ್ದು, ನಾಳೆ ಬೆಳಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡುತ್ತೇನೆ. ಅವರು ಕಸ ಗುಡಿಸು ಎಂದರೂ ಗುಡಿಸುತ್ತೇನೆ. ಆದರೆ ನನಗೆ ಟಿಕೆಟ್ ಕೊಡುವ ಸಂಪೂರ್ಣ ಭರವಸೆ ಇದೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಇದನ್ನು ಓದಿ: ಪಂಚ ‘ವಾರ್’ ರಾಜ್ಯಗಳ ಕದನಕ್ಕೆ ಮುಹೂರ್ತ ಫಿಕ್ಸ್ಒಂದೊಮ್ಮೆ ಚುನಾವಣೆಯ ಟಿಕೆಟ್ ಲಭಿಸದೇ ಇದ್ದರೆ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ನಾನು ಬೆಂಬಲಿಸುತ್ತೇನೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಧಿಕಾರದಲ್ಲಿದ್ದು, ಈ ಚುನಾವಣೆಯಲ್ಲಿ ಪಕ್ಷದ ಗೆಲುವು ಖಚಿತ. ಸದ್ಯ ಸಮ್ಮಿಶ್ರ ಸರ್ಕಾರ ಮೈತ್ರಿ ರಾಜಕಾರಣದಲ್ಲಿ ನಡೆಯುತ್ತಿದ್ದು, ಈಗಾಗಲೇ ಪಕ್ಷದಲ್ಲಿ ಲೋಕಸಭಾ ಚುನಾವಣೆ ಮೈತ್ರಿ ಮಾಡುವ ತೀರ್ಮಾನ ಮಾಡಲಾಗಿದೆ. ಪಕ್ಷದ ವರಿಷ್ಠರು ಯಾವುದೇ ನಿರ್ಣಯ ಕೈಗೊಂಡರೂ ನನ್ನ ಬೆಂಬಲವಿದೆ ಎಂದರು. ಇದನ್ನು ಓದಿ: ಕರ್ನಾಟಕ ಉಪ ಚುನಾವಣಾ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಂತಿದೆSign in to your account
Username or Email Address


Password

 Remember Me


