ಬೆಂಗಳೂರು: ಕಾಲೇಜಿನ ಆವರಣದಲ್ಲಿಯೇ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದಿರುವ ಘಟನೆ ಬನ್ನೇರುಘಟ್ಟ ನೈಸ್ ರಸ್ತೆಯ ಬಳಿ ಇರುವ ಟಿ.ಜಾನ್ ಕಾಲೇಜಿನಲ್ಲಿ ನಡೆದಿದೆ.ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಟಿ.ಜಾನ್ ಕಾಲೇಜು ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡಿದ್ದಾರೆ. ಈ ಘಟನೆ ಸೆಪ್ಟೆಂಬರ್ 20ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಬಾರಿಯು ಸಹ ಇದೆ ಕಾಲೇಜಿನ ಸೀನಿಯರ್ ವಿದ್ಯಾರ್ಥಿಗಳಿಂದ ಜೂನಿಯರ್ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್‌ ನಡೆದ ಗಲಾಟೆ ಆಗಿತ್ತು. ಈಗ ಮತ್ತೆ ರ‍್ಯಾಗಿಂಗ್‌ ನಡೆದಿದ್ದು, ಗಲಾಟೆ ನಡೆದಿದೆ.ಕೆಲವು ದಿನಗಳ ಹಿಂದೆ ಜೂನಿಯರ್ ವಿದ್ಯಾರ್ಥಿಗಳಿಗೆ ಹಾಗಲಕಾಯಿ ಜ್ಯೂಸ್ ಹಾಗು ಮಕ್ಕಳ ವೇಶಧರಿಸಿ ಬರುವಂತೆ ಸೀನಿಯರ್ ವಿದ್ಯಾರ್ಥಿಗಳು ರ‍್ಯಾಗಿಂಗ್‌ ಮಾಡಿದ್ದಾರೆ. ಈ ವೇಳೆ ಕೆಲವು ವಿದ್ಯಾರ್ಥಿಗಳು ಸೀನಿಯರ್ ಹೇಳಿದಂತೆ ಮಾಡಿದ್ದಾರೆ. ಆದ್ರೆ ಕೆಲವು ವಿದ್ಯಾರ್ಥಿಗಳು ಸೀನಿಯರ್ ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ್ದಾರೆ. ಇದರಿಂದ ಕೋಪಕೊಂಡು ಸೀನಿಯರ್ ಮತ್ತು ಜೂನಿಯರ್ ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದಿದೆ.ಸುಮಾರು 70 ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದಿದೆ. ಕೆಲವು ವಿದ್ಯಾರ್ಥಿಗಳಿಗೆ ಈ ಗಲಾಟೆಯಲ್ಲಿ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆದ್ರೆ ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿಯನ್ನು ಕೇಳಿದರೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲು ನಿರಾಕರಿಸಿದ್ದಾರೆ.ಅಷ್ಟೇ ಅಲ್ಲದೇ ಈ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳು ಮಾದಕ ವ್ಯಸನಿಗಳಿಗೆ ಮಾರು ಹೋಗುತ್ತಿದ್ದಾರೆ ಎಂದು ಸ್ಥಳಿಯರು ಹೇಳುತ್ತಿದ್ದಾರೆ. ಈ ಬಗ್ಗೆ ಪೋಷಕರು ಹೇಳಿದರು ಕಾಲೇಜು ಆಡಳಿತ ಮಂಡಳಿ ಮಾತ್ರ ರ‍್ಯಾಗಿಂಗ್‌ ನಡೆಯುತ್ತಿದ್ದರು ಕಣ್ಮುಚ್ಚಿ ಕುಳಿತಿದೆ. ಇದುವರೆಗೂ ಯಾವುದೇ ರೀತಿಯ ಸೂಕ್ತ ಕ್ರಮವನ್ನು ತೆಗೆದುಕೊಂಡಿಲ್ಲ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


