ಚಾಮರಾಜನಗರ: ಪ್ರಪಾತಕ್ಕೆ ಬಸ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದು, 39ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ತಮಿಳುನಾಡಿನ ದಿಂಬಮ್ ಘಾಟ್ ಬಳಿ ಜರುಗಿದೆ.ಶುಕ್ರವಾರ ಸಂಜೆ ಖಾಸಗಿ ಬಸ್ ಮೈಸೂರಿನಿಂದ ತಮಿಳುನಾಡಿಗೆ ಹೋಗುತ್ತಿತ್ತು. ಈ ವೇಳೆ ಬಸ್ ದಿಂಬಮ್ ಘಾಟ್ ನ 26ನೇ ತಿರುವಿನಲ್ಲಿ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಇದರಿಂದ ಮುತ್ತು ಮತ್ತು ಗುರುಸ್ವಾಮಿ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಘಟನೆಯಲ್ಲಿ 39ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಗಾಯಾಳುಗಳಿಗೆ ತಮಿಳುನಾಡಿನ ಸತ್ಯಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸತ್ಯಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


