ಬೆಂಗಳೂರು: ವಿವಾಹಿತ ಮಹಿಳೆಯೊಬ್ಬರಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಥಳಿಸಿ, ಚಪ್ಪಲಿಯಿಂದ ಹೊಡೆದ ಘಟನೆ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ.ವಾಜರಹಳ್ಳಿಗೆ ಇಂದು ಬೆಳಗ್ಗೆ ಬಂದ ಯುವಕ, ಮಹಿಳೆಗೆ ಕರೆ ಮಾಡಿ ಭೇಟಿಯಾಗುವಂತೆ ಕೇಳಿಕೊಂಡಿದ್ದಾನೆ. ಈ ವೇಳೆ ಸ್ಥಳೀಯರು ಹಾಗೂ ಸಂಬಂಧಿಕರೊಂದಿಗೆ ಬಂದ ಮಹಿಳೆ ಯುವಕನನ್ನು ಹಿಡಿದು ಥಳಿಸಿದ್ದಾರೆ. ಯುವಕನ ವರ್ತನೆಯಿಂದ ಬೇಸತ್ತಿದ್ದ ಮಹಿಳೆ ಒದ್ದು, ಚಪ್ಪಲಿಯಿಂದ ಹೊಡೆದು ಬುದ್ಧಿ ಕಲಿಸಿದ್ದಾರೆ.ನಿನಗೆ ನಂಬರ್ ಹೇಗೆ ಸಿಕ್ಕಿದೆ? ಅಂತಾ ಕೇಳಿದ್ದಕ್ಕೆ, ಸಾರ್ವಜನಿಕ ಶೌಚಾಲಯದಲ್ಲಿ ಈ ನಂಬರ್ ಬರೆದಿದ್ದರು. ಅದನ್ನು ನಾನು ಪಡೆದು, ಕರೆ ಮಾಡಿದೆ ಎಂದು ಯುವಕ ಹೇಳಿದ್ದಾನೆ. ಕಳೆದ ಒಂದು ವಾರದಿಂದ ಕರೆ ಮಾಡಿ, ಅಶ್ಲೀಲವಾಗಿ ಮಾತನಾಡುತ್ತಿದ್ದ. ಮಧ್ಯರಾತ್ರಿ ಕೂಡ ಕರೆ ಮಾಡುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ.ಇತ್ತ ಥಳಿಸಿಕೊಂಡ ಯುವಕ, ಮತ್ತೊಮ್ಮೆ ಇಂತಹ ತಪ್ಪು ಮಾಡಲ್ಲ, ದಯವಿಟ್ಟು ಬಿಟ್ಟುಬಿಡಿ ಎಂದು ಅಂಗಲಾಚಿದ್ದಾನೆ. ಸ್ಥಳದಲ್ಲಿ ಸೇರಿದ್ದ ಜನ ಅವನನ್ನು ಕೈ ಬಿಡುತ್ತಿದ್ದಂತೆ ಪರಾರಿಯಾಗಿದ್ದಾನೆ.ನೆಲಮಂಗಲ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


