ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕು ಹುರಳಿಹಾಳು ಗ್ರಾಮದ ಹೊರವಲಯದ ಹೊಲದಲ್ಲಿ ವಿವಾಹಿತೆ ಹಾಗೂ ಯುವಕ ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.ವಿವಾಹಿತ ಮಹಿಳೆ ಶೋಭಿತಾ(21) ಹಾಗೂ ಯುವಕ ತಿಪ್ಪೇಸ್ವಾಮಿ(21) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದವರು. ಅಕ್ರಮ ಸಂಬಂಧ ಆರೋಪದ ಹಿನ್ನೆಲೆಯಲ್ಲಿ ಶೋಭಿತಾ ಹಾಗೂ ತಿಪ್ಪೇಸ್ವಾಮಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ.ಶೋಭಿತಾ ಹಾಗೂ ತಿಪ್ಪೇಸ್ವಾಮಿ ಇಬ್ಬರ ಮೃತದೇಹ ಒಂದೇ ಸೀರೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರು ಚಿರತೆಗುಂಡು ಗ್ರಾಮದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕೊಲೆಯಾಗಿರುವು ಕುರಿತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.ಸದ್ಯ ಘಟನಾ ಸ್ಥಳಕ್ಕೆ ಗುಡೇಕೋಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


