ಮಂಡ್ಯ: ಲಾರಿ ಹರಿದ ಪರಿಣಾಮ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಐವರು ಪಾದಚಾರಿಗಳು ದಾರುಣವಾಗಿ ಮೃತಪಟ್ಟ ಘಟನೆ ನಗರದ ಗುತ್ತಲು ರಸ್ತೆಯಲ್ಲಿ ನಡೆದಿದೆ.ಕೆಎಂ ದೊಡ್ಡಿ ಹಾಗೂ ಮಂಡ್ಯ ಮಾರ್ಗದ ಬಳಿಯ ಗುತ್ತಲ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿ ನಿಂತಿದ್ದವರ ಮೇಲೆಯೇ ಹರಿದಿದೆ. ಪರಿಣಾಮ ಲಾರಿ ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಐದು ಮಂದಿ ಮೃತಪಟ್ಟರೆ, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಗುದ್ದಾತ್ತಾ ಸಾಗಿದ್ದರಿಂದ ಲಾರಿಯಡಿ ಪಾದಚಾರಿಗಳು ಸಿಕ್ಕಿಹಾಕಿಕೊಂಡಿದ್ದಾರೆ.ಲಾರಿ ಹರಿದ ತಕ್ಷಣ ಎಚ್ಚೆತ್ತ ಸ್ಥಳೀಯರು ಗಾಯಾಳುಗಳು ಹಾಗೂ ಮೃತದೇಹಗಳನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಮಂಡ್ಯ ಎಸ್‍ಪಿ ಶಿವಪ್ರಕಾಶ್ ದೇವರಾಜ್ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಾಹಿತಿಯ ಪ್ರಕಾರ ಲಾರಿಯ ಬ್ರೇಕ್ ಫೇಲ್ ಆಗಿದ್ದರಿಂದ ಅವಘಡ ಸಂಭವಿಸಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


