ಚಿಕ್ಕಮಗಳೂರು: ನಡೆದಾಡುವ ದೇವರೆಂದೇ ಜನರಿಂದ ಖ್ಯಾತಿ ಪಡೆದಿರುವ ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದ ಸಮೀಪದ ಸ್ವರ್ಣ ಪೀಠಿಕೇಶ್ವರಿ ಮಠದ ಅವಧೂತ ವಿನಯ್ ಗುರೂಜಿಯವರು ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಂಡಿದ್ದಾರೆ.ಭಾನುವಾರ ಹರಿಹರಪುರದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಅವಧೂತ ವಿನಯ್ ಗುರೂಜಿಯವರು, ಪೊರಕೆ ಹಿಡಿದು ಕೊಂಡು ರಸ್ತೆಗಳನ್ನು ಸ್ವಚ್ಛಗೊಳಿಸಿದ್ದರು. ಇದಲ್ಲದೇ ಸ್ವತಃ ಬಸ್ ಸ್ಟ್ಯಾಂಡ್‍ನಲ್ಲಿರುವ ಶೌಚಾಲಯವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತಾ ಅಭಿಯಾನದ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸಿಕೊಟ್ಟಿದ್ದಾರೆ.ಇತ್ತೀಚೆಗೆ ರಾಜಕಾರಣಿಗಳ ಭೇಟಿಯಿಂದ ವಿನಯ್ ಗುರೂಜಿ ಸಾಕಷ್ಟು ಸುದ್ದಿಯಾಗಿದ್ದರು. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಗುರೂಜಿಯ ಪಾದಪೂಜೆ ನಡೆಸಿದ್ದರು. ಅಷ್ಟೇ ಅಲ್ಲದೇ ಸ್ಪೀಕರ್ ರಮೇಶ್ ಕುಮಾರ್ ಗುರೂಜಿಗೆ ಆರತಿ ಬೆಳಗಿದ್ದರು. ಇದೆಲ್ಲಾ ಮಾಧ್ಯಮದಲ್ಲಿ ಸುದ್ದಿಯಾದ ಮೇಲೆ ಬರುವ ಭಕ್ತರ ಸಂಖ್ಯೆ ಕೂಡ ಡಬಲ್ ಆಗಿತ್ತು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


