ಮೈಸೂರು: ಮೃತಪಟ್ಟ ಬಳಿಕವೂ ಚಿಕಿತ್ಸೆ ನೀಡಿ ಹಣ ಪಡೆದ ಆರೋಪದ ಮೇಲೆ ರೋಗಿಯ ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಘಟನೆ ನಗರದ ಯರಗನಹಳ್ಳಿಯಲ್ಲಿ ನಡೆದಿದೆ.ಪ್ರೀತಂ ಗೌಡ (22) ಆಸ್ಪತ್ರೆಯಲ್ಲಿ ದಾಖಲಾಗಿ ಮೃತಪಟ್ಟ ರೋಗಿ. ಕಳೆದ ಶುಕ್ರವಾರ ಪ್ರೀತಂ ಗೌಡ ತೀವ್ರ ಹಲ್ಲು ನೋವಿನಿಂದ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆಯೂ ಸಹ ವೈದ್ಯರು ಪ್ರೀತಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ್ದರು. ಆದರೆ ಇದಾದ ಅರ್ಧ ಗಂಟೆ ಬಳಿಕ ಪ್ರೀತಂ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಇದಲ್ಲದೇ ಚಿಕಿತ್ಸೆಯ ವೆಚ್ಚವನ್ನು ಪಾವತಿಸಿಕೊಂಡಿದ್ದಾರೆ.ಪ್ರೀತಂ ಈಗಾಗಲೇ ಮೃತಪಟ್ಟಿದ್ದರೂ ವೈದ್ಯರು ಚಿಕಿತ್ಸೆ ನೀಡಿ, ಹಣ ಪಡೆದಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಆಗಮಿಸಿದ ಸಂಬಂಧಿಕರು ಆಸ್ಪತ್ರೆ ಆವರಣದ ಬಳಿ ಪ್ರತಿಭಟನೆ ನಡೆಸಿ, ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಆವನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿ, ವಿಚಾರಣೆ ನಡೆಸುತ್ತಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


