ಬೆಂಗಳೂರು: ಮುಡಾ ಹಗರಣ (MUDA Scam) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ (Siddaramaiah) ಮತ್ತೆ ರಿಲೀಫ್‌ ಸಿಕ್ಕಿದೆ. ಅನಿರ್ಧಿಷ್ಟಾವಧಿ ವರೆಗೆ ತೀರ್ಪು ಕಾಯ್ದಿರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.ಇಂದು ನಡೆದ ವಿಚಾರಣೆಯಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾ.ನಾಗಪ್ರಸನ್ನ ತೀರ್ಪು ಕಾಯ್ದಿರಿಸಿ ಆದೇಶಿಸಿದ್ದಾರೆ. ಮುಂದಿನ ತೀರ್ಪು ಬರುವವರೆಗೂ ಮಧ್ಯಂತರ ಆದೇಶ ಮುಂದುವರಿಯಲಿದೆ. ಇದನ್ನೂ ಓದಿ: ಮೀಸಲಾತಿ ರದ್ದು ಹೇಳಿಕೆ ವಿವಾದ – ರಾಹುಲ್ ಗಾಂಧಿ ಪರ ನಿಂತ ಸಿಎಂಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಕ್ರಿಮಿನಲ್‌ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ಗುರುವಾರ ಹೈಕೋರ್ಟ್‌ನಲ್ಲಿ ನಡೆಯಿತು.Sign in to your account
Username or Email Address


Password

 Remember Me


