ಯಾದಗಿರಿ: ಸಕಾಲಕ್ಕೆ ವೈದ್ಯರು ಚಿಕಿತ್ಸೆ ನೀಡದ ಹಿನ್ನೆಲೆ ಬಾಣಂತಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.ಲಕ್ಷ್ಮಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟ ಬಾಣಂತಿ. ಸುರಪುರ ತಾಲೂಕಿನ ರುಕ್ಮಾಪುರ ಗ್ರಾಮದ ನಿವಾಸಿಯಾದ ಲಕ್ಷ್ಮಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಸುಕಿನ ಜಾವವೇ ಲಕ್ಷ್ಮಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಲಕ್ಷ್ಮಿ ಮಗುವಿಗೆ ಜನ್ಮ ನೀಡಿದ ಖುಷಿಯಲ್ಲಿದ್ದರು. ಹೆರಿಗೆ ನಂತರ ಮತ್ತೆ ಲಕ್ಷ್ಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ತೋರಿದ ಕಾರಣ ಬಾಣಂತಿ ಮೃತಪಟ್ಟಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ ಆಸ್ಪತ್ರೆ ವೈದ್ಯರು ಬಾಣಂತಿ ಶ್ವಾಸಕೋಶದ ಸಮಸ್ಯೆದಿಂದ ಬಳಲಿ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


