ಬಾಗಲಕೋಟೆ: ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ನಡೆದಿದೆ.ಸಿದ್ದಯ್ಯ ಗುರುಪಾದಯ್ಯ ಕಾಡದೇವರ ಎಂಬಾತನೇ ಸಾರ್ವಜನಿಕರಿಂದ ಥಳಿತಕ್ಕೊಳಗಾದ ಕಾಮುಕ. ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಕಾಡಸಿದ್ದೇಶ್ವರ ದೇವಾಲಯದ ಬಳಿ ಕರೆದುಕೊಂಡು ಹೋಗಿದ್ದಾನೆ. ದೇವಸ್ಥಾನದ ಬಳಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ಯತ್ನಿಸಿದಾಗ ಸ್ಥಳೀಯ ಯುವಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಆರೋಪಿ ಸಿದ್ದಯ್ಯ ಗುರುಪಾದಯ್ಯ ಈ ಹಿಂದೆ ಕೆಲ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದು, ಈತನ ವಿರುದ್ಧ ಬನಹಟ್ಟಿ ಪೊಲೀಸರು ಪೋಸ್ಕೊ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


