ಬೆಂಗಳೂರು: ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ಝಿರೋ ಟ್ರಾಫಿಕ್ ಓಡಾಟ ಮುಂದುವರಿದಿದೆ.ಇಂದು ಬೆಳಗ್ಗೆಯೇ ಪರಮೇಶ್ವರ್ ಹೋಗುತ್ತಿದ್ದ ರಾಜಭವನ, ಅಶೋಕ ರೋಡ್ ಹೋಟೆಲ್‍ನಲ್ಲಿ ಉಳಿದೆಲ್ಲಾ ವಾಹನಗಳನ್ನ ನಿಲ್ಲಿಸಿ ಟ್ರಾಫಿಕ್ ಪೊಲೀಸರು ತಮ್ಮ ಇಲಾಖೆಯ ಮುಖ್ಯಸ್ಥರು ಆಗಿರುವ ಗೃಹ ಸಚಿವ ಪರಮೇಶ್ವರ್ ರೋಡ್ ಕ್ಲಿಯರ್ ಮಾಡಿದ್ದಾರೆ.ಮಾಜಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆ ಸಂಬಂಧ ನಡೆಯುತ್ತಿರುವ ಪಕ್ಷದ ನಾಯಕರ ಸಭೆಗೆ ಡಿಸಿಎಂ ಹೋಗುತ್ತಿದ್ದರು. ಹಾಗಾಗಿ ಇಂದು ಮತ್ತೆ ಝಿರೋ ಟ್ರಾಫಿಕ್ ಮೂಲಕ ರಸ್ತೆಯಲ್ಲಿ ಪ್ರಯಾಣಿಸಿದ್ದಾರೆ.ಇತ್ತೀಚೆಗೆ ಸಿಲಿಕಾನ್ ಸಿಟಿ ಜನ ಮಳೆಯಿಂದ ತತ್ತರಿಸಿ ಹೋಗಿದ್ದರು. ಈ ವೇಳೆ ಸಮ್ಮಿಶ್ರ ಸರ್ಕಾರ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಝಿರೋ ಟ್ರಾಫಿಕ್ ನಲ್ಲಿ ಸಂಚರಿಸಿ ಅಧಿಕಾರದ ದರ್ಪ ಮೆರೆದಿದ್ದರು. ಕಳೆದ ಎರಡು ದಿನಗಳಿಂದ ಭಾರೀ ಮಳೆಗೆ ಸಿಲುಕಿದ್ದ ಬೆಂಗಳೂರಿನ ಜನರು ಟ್ರಾಫಿಕ್ ಸಮಸ್ಯೆಯಿಂದ ಹೈರಣಾಗಿದ್ದಾರೆ. ಇದನ್ನೂ ಓದಿ: ಡಿಸಿಎಂ ಪರಮೇಶ್ವರ್ ದಾದಾಗಿರಿ – ಮಳೆಯ ನಡುವೆಯೂ ಝಿರೋ ಟ್ರಾಫಿಕ್‍ನಲ್ಲಿ ಸಂಚಾರ!ಮಂಗಳವಾರ ಮಧ್ಯಾಹ್ನದ ವೇಳೆಗೆ ಮತ್ತೆ ಮಳೆ ಆರಂಭವಾಗಿದ್ದರಿಂದ ನಗರ ಬಹುತೇಕ ಕಡೆ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಈ ವೇಳೆ ಡಿಸಿಎಂ ಪರಮೇಶ್ವರ್ ಅವರು ಯಲಹಂಕ ಕಡೆಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ ಕಾರಣ ಝಿರೋ ಟ್ರಾಫಿಕ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಡಿಸಿಎಂ ಸೂಚನೆಯಂತೆ ನಗರದ ಬಳ್ಳಾರಿ ರಸ್ತೆಯಲ್ಲಿ ಝಿರೋ ಟ್ರಾಫಿಕ್ ಮಾಡಲಾಗಿತ್ತು. ಇದರಿಂದ ಬೆಂಗಳೂರು ವಿಮಾನ ನಿಲ್ದಾಣ ಸಂಪರ್ಕಿಸುವ ಬಳ್ಳಾರಿ ರಸ್ತೆ ಮತ್ತು ಈ ರಸ್ತೆಗೆ ಸಂಪರ್ಕ ಕಲ್ಪಿಸುವ ಇತರ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದನ್ನೂ ಓದಿ: ಇರುವ ಅವಕಾಶ ಬಳಸಿಕೊಳ್ತಿದ್ದೇನೆ, ನಿಮಗೆ ಹೊಟ್ಟೆ ಉರಿ: ಝಿರೋ ಟ್ರಾಫಿಕ್‍ಗೆ ಡಿಸಿಎಂ ಸಮರ್ಥನೆಝಿರೋ ಟ್ರಾಫಿಕ್ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಗಣ್ಯವ್ಯಕ್ತಿ, ರಾಜ್ಯಪಾಲರು ಹಾಗೂ ಗೃಹ ಸಚಿವರಿಗೂ ಸಹ ಝಿರೋ ಟ್ರಾಫಿಕ್ ಅವಕಾಶ ನೀಡಲಾಗಿದೆ. ಹೀಗಾಗಿ ಇದನ್ನು ನಾನು ಬಳಸಿಕೊಳ್ಳುತ್ತಿದ್ದೇನೆ. ಝಿರೋ ಟ್ರಾಫಿಕ್ ಅಗತ್ಯ ಇದೆ ಎನ್ನುವುದರಿಂದ ಅವಕಾಶ ನೀಡಲಾಗಿದೆ. ಈ ಹಿಂದಿನ ಗೃಹ ಸಚಿವರು ಬೇಡ ಎಂದಿದ್ದರು. ಹಾಗಂತ ನಾನು ಸಹ ಬೇಡ ಎನ್ನಬೇಕಿಲ್ಲ. ನನಗೆ ಇರುವ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ. ನಾನು ಝಿರೋ ಟ್ರಾಫಿಕ್ ತೆಗೆದುಕೊಳ್ಳುವುದು ಮಾಧ್ಯಮಗಳಿಗೆ ಹೊಟ್ಟೆ ಹುರಿ ಎನ್ನುವ ಮೂಲಕ ಮತ್ತೊಮ್ಮ ತಮ್ಮ ಅಧಿಕಾರದ ದರ್ಪ ತೋರಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


