ದಾವಣಗೆರೆ: ಅಪಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಹರಪ್ಪನಹಳ್ಳಿ ಸಿಪಿಐ ಮಾನವೀಯತೆಯನ್ನು ಮೆರೆದಿದ್ದಾರೆ.ಹರಪ್ಪನಹಳ್ಳಿಯ ಹಿಕ್ಕಿಂಗೆರೆ ಕ್ರಾಸ್ ಬಳಿ ಬೈಕ್ ನಲ್ಲಿ ಅಪಘಾತವಾದ ದಂಪತಿ ಗಾಯದಿಂದ ನರಳಾಡುತ್ತಿದ್ದರು. ಅದೇ ಸಮಯದಲ್ಲಿ ಸಿಪಿಐ ದುರುಗಪ್ಪ ದಾವಣಗೆರೆಯಿಂದ ಹರಪ್ಪನಹಳ್ಳಿಗೆ ಹೋಗುತ್ತಿದ್ದರು. ಅಪಘಾತದಿಂದ ಬಿದ್ದಿರುವ ಗಾಯಾಳುಗಳನ್ನು ನೋಡಿ ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನು ಓದಿ: ಗರ್ಭಿಣಿಯನ್ನು ಹೊತ್ತು ಆಸ್ಪತ್ರೆಗೆ ಸಾಗಿಸಿದ ರೈಲ್ವೇ ಪೊಲೀಸ್- ಫೋಟೋ ವೈರಲ್
ಪ್ರಥಮ ಚಿಕಿತ್ಸೆಗೆ ಅರಸಿಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆ ಅಗತ್ಯ ಕಂಡುಬಂದಿದ್ದರಿಂದ ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ಅಂಬುಲೆನ್ಸ್ ಮೂಲಕ ರವಾನಿಸಿದ್ದಾರೆ. ಗಾಯಾಳುಗಳನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ದಾಖಲು ಮಾಡಿದ್ದಕ್ಕೆ ಸಾರ್ವಜನಿಕರು ಸಿಪಿಐ ದುರುಗಪ್ಪನವರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಈ ಹಿಂದೆ ಉತ್ತರ ಪ್ರದೇಶದ ರೈಲ್ವೇ ಪೊಲೀಸ್ ಅಧಿಕಾರಿಯೊಬ್ಬರು ಜನಸಮೂಹವಿದ್ದ ಸ್ಥಳದಿಂದ ಗರ್ಭಿಣಿಯನ್ನು ಹೊತ್ತು, ಆಸ್ಪತ್ರೆಗೆ ದಾಖಲಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸರಿಯಾದ ಸಮಯದಲ್ಲಿಯೇ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿ ಹೀರೋ ಎನಿಸಿಕೊಂಡಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


