ಮಂಗಳೂರು: ಕೈ ಹಿಡಿದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆಗೈದ ಘಟನೆ ಮಂಗಳೂರಿನಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.ಮಂಗಳೂರಿನ ಬಜ್ಪೆ ಠಾಣೆಯಲ್ಲಿ ಇತ್ತೀಚೆಗೆ ಗಂಜಿಮಠ ನಿವಾಸಿ ಮಹಮ್ಮದ್ ಸಮೀರ್ ನಾಪತ್ತೆಯಾಗಿರುವ ಕುರಿತು ಕೇಸು ದಾಖಲಾಗಿತ್ತು. ಬೆಂಗಳೂರಿಗೆ ಪತ್ನಿ ಫಿರ್ದೌಸ್ ಮತ್ತು ಮಗುವಿನ ಜೊತೆ ತೆರಳಿದ್ದ ಸಮೀರ್ ನಾಪತ್ತೆ ಆಗಿದ್ದಾನೆಂದು ಆತನ ತಂದೆ ದೂರು ನೀಡಿದ್ದರು.ಪ್ರಕರಣದ ಜಾಡು ಹಿಡಿದು ಹೋದ ಪೊಲೀಸರು, ಮಹಮ್ಮದ್ ಸಮೀರ್ ನನ್ನು ತಮಿಳುನಾಡಿನ ಕೃಷ್ಣಗಿರಿಯಲ್ಲಿ ಕೊಲೆಗೈದಿರುವುದನ್ನು ಪತ್ತೆ ಹಚ್ಚಿದ್ದಾರೆ. ಇದೇ ವೇಳೆ ಬೆಂಗಳೂರಿಗೆ ತೆರಳಿದ್ದ ಪತ್ನಿ ಫಿರ್ದೌಸ್ ಸೆ.19 ರಂದು ಕಾಪುವಿನ ತವರು ಮನೆಗೆ ಆಗಮಿಸಿದ್ದು, ಮರುದಿನ ಮೂರು ತಿಂಗಳ ಮಗುವನ್ನು ಮನೆಯಲ್ಲಿ ಬಿಟ್ಟು ನಾಪತ್ತೆಯಾಗಿದ್ದಾಳೆ.ಹೀಗಾಗಿ ಕಾಪು ಪೊಲೀಸ್ ಠಾಣೆಯಲ್ಲಿ ಮನೆಯವರು ಫಿರ್ದೌಸ್ ನಾಪತ್ತೆ ಬಗ್ಗೆ ಕೇಸು ದಾಖಲಿಸಿದ್ದಾರೆ. ಪತ್ನಿಯ ನಾಪತ್ತೆಯಿಂದಾಗಿ ಕೊಲೆಯ ಹಿಂದೆ ಆಕೆಯ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇಂದು ಸಮೀರ್ ಮೃತದೇಹವನ್ನು ಮಂಗಳೂರಿನ ಗಂಜಿಮಠದಲ್ಲಿರುವ ಆತನ ಮನೆಗೆ ತರಲಾಗುತ್ತಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


