ಮೈಸೂರು: ಕಾರ್ ಅಪಘಾತಕ್ಕೀಡಾಗಿ ಗಾಯಗೊಂಡಿರುವ ನಟ ದರ್ಶನ್ ಅವರಿಗೆ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ದರ್ಶನ್ ಜೊತೆಗೆ ನಟ ದೇವರಾಜ್, ಪ್ರಜ್ವಲ್ ಹಾಗೂ ಅಂತೋನಿ ಅವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ನಾಲ್ವರನ್ನು ಸ್ಪೇಷಲ್ ವಾರ್ಡ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.ದರ್ಶನ್, ದೇವರಾಜ್, ಅಂತೋನಿಯವರಿಗೆ ಸೋಮವಾರ ಶಸ್ತ್ರ ಚಿಕಿತ್ಸೆ ನಡೆದಿದೆ. ಇಂದು ಸಂಜೆಯೊಳಗೆ ನಟ ದೇವರಾಜ್, ಪುತ್ರ ಪ್ರಜ್ವಲ್ ದೇವರಾಜ್ ಡಿಸ್ಚಾರ್ಜ್ ಆಗಲಿದ್ದಾರೆ. ಆದ್ರೆ ದರ್ಶನ್ ಅವರು ಇನ್ನೂ ಒಂದು ದಿನ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ವೈದ್ಯರಿಂದ ದರ್ಶನ್, ದೇವರಾಜ್ X-RAY ಬಿಡುಗಡೆ: ಎಲ್ಲೆಲ್ಲಿ ಗಾಯವಾಗಿದೆ?ಗಾಯಾಳುಗಳನ್ನು ನೋಡಲು ಅಭಿಮಾನಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಭದ್ರತೆ ಮುಂದುವರಿದಿದೆ. ಸಿ.ಆರ್.ಪಿ.ಎಫ್ ತುಕಡಿ ಪೊಲೀಸ್ ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ. ಇದನ್ನೂ ಓದಿ: ದರ್ಶನ್ ಸೇಫ್ ಆಗಿದ್ದು, ಯಾರಾದ್ರು ರೂಮರ್ಸ್ ಹಬ್ಬಿಸಿದ್ರೆ ನಂಬಬೇಡಿ: ಸೃಜನ್ ಲೋಕೇಶ್ಘಟನೆಯೇನು?:
ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಸೋಮವಾರ ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.  ಇದನ್ನೂ ಓದಿ: ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿದರ್ಶನ್ ಮನವಿಯೇನು?:
ದರ್ಶನ್ ಆಸ್ಪತ್ರೆ ಸೇರುತ್ತಿದ್ದಂತೆಯೇ ಇತ್ತ ಅಭಿಮಾನಿಗಳು ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದರು, ಹೀಗಾಗಿ ದರ್ಶನ್ ಅವರು ಆಸ್ಪತ್ರೆಯಿಂದಲೇ ವಾಯ್ಸ್ ರೆಕಾರ್ಡ್ ಮಾಡಿ ಅದನ್ನು ವಾಟ್ಸಪ್ ನಲ್ಲಿ ಕಳುಹಿಸುವ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ ಅಪಘಾತವಾಗಿದ್ದ ಕಾರ್ ಮಿಸ್ಸಿಂಗ್ ಸ್ಟೋರಿಯ ಇನ್‍ಸೈಡ್ ಸ್ಟೋರಿ ಇಲ್ಲಿದೆ`ಎಲ್ಲರಿಗೂ ನಮಸ್ಕಾರಪ್ಪ.. ನನ್ನ ಅನ್ನದಾತರು, ಅಭಿಮಾನಿಗಳಲ್ಲಿ ನನ್ನದೊಂದು ರಿಕ್ವೆಸ್ಟ್.. ದಯವಿಟ್ಟು ನನಗೆ ಏನೂ ಆಗಿಲ್ಲ. ಆರಾಮಾಗಿರಿ.. ಇನ್ನು ಒಂದು ದಿನ ಆಸ್ಪತ್ರೆಯಲ್ಲಿದ್ದು, ನಾಳೆ ಬರುತ್ತೇನೆ. ಆ ಬಳಿಕ ಎಲ್ಲರಿಗೂ ಸಿಗುತ್ತೇನೆ. ಹೀಗಾಗಿ ದಯವಿಟ್ಟು ಯಾರೂ ಆಸ್ಪತ್ರೆಯತ್ತ ಬರಬೇಡಿ. ಇದೊಂದು ನನ್ನ ಮನವಿ ಅಂತಾನೇ ತಿಳಿದುಕೊಳ್ಳಿ. ಯಾಕಂದ್ರೆ ಬೇರೆ ರೋಗಿಗಳು ಆಸ್ಪತ್ರೆಯಲ್ಲಿದ್ದಾರೆ. ಹೀಗಾಗಿ ಅವರಿಗೆ ತೊಂದರೆಯಾಗುತ್ತದೆ ಎಂಬುದು ನನ್ನ ಭಾವನೆ. ಒಟ್ಟಿನಲ್ಲಿ ಎಲ್ಲರೂ ಆರಾಮಾಗಿರಿ. ನಿಮ್ಮ ದರ್ಶನ್ ಗೆ ಏನೂ ಆಗಿಲ್ಲ.. ಧನ್ಯವಾದ..’ ಅಂತ ತಿಳಿಸಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


