ದಾವಣಗೆರೆ: ಅಪಘಾತದಲ್ಲಿ ನಟ ದರ್ಶನ್ ಗಾಯಗೊಂಡ ಹಿನ್ನೆಲೆ ದಾವಣಗೆರೆಯಲ್ಲಿ ದರ್ಶನ್ ಅಭಿಮಾನಿಗಳು ಬೇಗ ಗುಣಮುಖರಾಗಲೆಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.ನಗರದ ಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಅಭಿಮಾನಿಗಳು ಮೆಚ್ಚಿನ ನಟ ದಿ ಬಾಸ್ ಬೇಗನೇ ಗುಣಮುಖರಾಗಲಿ, ಮುಂದೇ ಯಾವುದೇ ತೊಂದರೆ ಬಾರದೇ ಇರಲಿ ಎಂದು ಪಾರ್ಥನೆ ಮಾಡಿಕೊಂಡಿದ್ದಾರೆ. ನಟ ದರ್ಶನ್ ಭಾವಚಿತ್ರವಿದ್ದ ಫ್ಲೆಕ್ಸ್ ಹಿಡಿದು ಜೈಕಾರ ಹಾಕಿದರು.ಸದ್ಯಕ್ಕೆ ಕೊಲಂಬಿಯಾ ಏಷಿಯಾ ಆಸ್ಪತ್ರೆಯು ನಟ ದರ್ಶನ್ ಹಾಗೂ ಇತರರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ದರ್ಶನ್ ಅವರ ಬಲಗೈ ಮೂಳೆ ಮುರಿದಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಶಸ್ತ್ರಚಿಕಿತ್ಸೆ ನಡೆಸಿ ದರ್ಶನ್ ಕೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ. ಅಲ್ಲದೇ ಅವರನ್ನು ಶೀಘ್ರವೇ ವಾರ್ಡ್ ಗೆ ಸ್ಥಳಾಂತರಿಸಲಾಗುತ್ತದೆ. ಒಂದು ದಿನ ಆಸ್ಪತ್ರೆಯಲ್ಲೇ ಅವರು ವಿಶ್ರಾಂತಿ ಪಡೆಯಲಿದ್ದು, ಆರೋಗ್ಯ ಸುಧಾರಿಸಿದ ಮೇಲೆ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯ ಡಾ. ಉಪೇಂದ್ರ ಶಣೈ ಹೇಳಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


