ರಾಯಚೂರು: ಪತಿ ಶವದೊಂದಿಗೆ ಅಂಬುಲೆನ್ಸ್‌ನಲ್ಲಿ ಹೊರಟಿದ್ದ ಮಹಿಳೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಸಂತೆಕೆಲೂರು ಬಳಿ ನಡೆದಿದೆ.ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ 30 ವರ್ಷದ ಶ್ರೀದೇವಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತ ಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಪತಿ ಗಂಗಪ್ಪ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಶವವನ್ನ ಸುರಪುರಕ್ಕೆ ಮರಳಿ ತರುವಾಗ ಈ ಅಪಘಾತ ನಡೆದಿದೆ. ನಿದ್ರೆ ಮಂಪರಿನಲ್ಲಿದ್ದ ಚಾಲಕ ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತವಾಗಿದೆ. ಈ ಅಪಘಾತದಲ್ಲಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು, ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಅಂಬುಲೆನ್ಸ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಗಾಯಾಳುಗಳನ್ನ ಹೊರತರಲು ಮಸ್ಕಿ ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಪಡಬೇಕಾಯಿತು. ಸುರಪುರದಿಂದ ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದ ಕುಟುಂಬದ ಪತಿ, ಪತ್ನಿ ಇಬ್ಬರೂ ಈಗ ಸಾವನ್ನಪ್ಪಿದ್ದಾರೆ. ಘಟನೆ ಹಿನ್ನೆಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


