ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರಿನ ಹೊರವಲಯದ ಹಿನಕಲ್ ಬಳಿ ಈ ಅಪಘಾತ ನಡೆದಿದ್ದು, ದರ್ಶನ್ ಅವರ ಬಲಗೈ ಮೂಳೆ ಮುರಿದಿದೆ. ಸದ್ಯ ದರ್ಶನ್ ಅವರ ಜೊತೆ ಪತ್ನಿ ವಿಜಯಲಕ್ಷ್ಮಿ ಮಾತನಾಡಿ ಅವರ ಆರೋಗ್ಯದ ಸ್ಥಿತಿ ಬಗ್ಗೆ ಮಾಧ್ಯಮಗಳ ಮೂಲಕ ಅಭಿಮಾನಿಗಳಿಗೆ ತಿಳಿಸಿದರು.ದರ್ಶನ್ ಅವರಿಗೆ ಯಾವುದೇ ದೊಡ್ಡ ಗಾಯಗಳಾಗಿಲ್ಲ. ಸದ್ಯ ಅವರಿಗೆ ಏನೂ ಆಗಿಲ್ಲ, ಅವರು ಕ್ಷೇಮವಾಗಿದ್ದಾರೆ. ಅಭಿಮಾನಿಗಳು ಯಾರೂ ಚಿಂತೆ ಮಾಡುವ ಅಗತ್ಯವಿಲ್ಲ. ದರ್ಶನ್ ಅವರ ಕೈಗೆ ಪೆಟ್ಟಾಗಿ ಮೂಳೆಗೆ ಏಟು ಬಿದಿದ್ದೆ. ಸ್ವಲ್ಪ ವಿಶ್ರಾಂತಿ ಪಡೆದರೆ ಅವರು ಬೇಗ ಗುಣವಾಗುತ್ತಾರೆ ಎಂದು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ತಿಳಿಸಿದರು. ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರ್ ಅಪಘಾತಸದ್ಯ ದರ್ಶನ್ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಒಂದು ಗಂಟೆ ನಂತರ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗುತ್ತದೆ. ದರ್ಶನ್ ಅವರ ತಾಯಿ, ತಮ್ಮ ದಿನಕರ್ ಕೂಡ ಆಸ್ಪತ್ರೆಗೆ ಬರುತ್ತಿದ್ದಾರೆ. ಅಲ್ಲದೇ ಹಿರಿಯ ನಟ ದೇವರಾಜ್ ಅವರ ಬಗ್ಗೆಯೂ ಮಾತನಾಡಿದರು. ದೇವರಾಜ್ ಅವರು ಕ್ಷೇಮವಾಗಿದ್ದಾರೆ. ಅವರ ಕುಟುಂಬದವರು ಕೂಡ ಇಲ್ಲಿಯೇ ಇದ್ದಾರೆ. ದೇವರಾಜ್ ಹಾಗೂ ಪ್ರಜ್ವಲ್ ಕ್ಷೇಮವಾಗಿದ್ದಾರೆ ಎಂದರು. ಇದನ್ನೂ ಓದಿ: ದರ್ಶನ್ ಕಾರ್ ಅಪಘಾತದ ಬಗ್ಗೆ ನಿರ್ಮಾಪಕ ಸಂದೇಶ್ ನಾಗರಾಜ್ ಹೀಗಂದ್ರುಭಾನುವಾರ ದರ್ಶನ್, ದೇವರಾಜ್ ಹಾಗು ಪ್ರಜ್ವಲ್ ದೇವರಾಜ್ ಅವರು ಮೃಸೂರಿನ ಮೃಗಾಲಯಕ್ಕೆ ಭೇಟಿ ಕೊಟ್ಟಿದ್ದರು. ಅಷ್ಟೇ ಅಲ್ಲದೇ ಪ್ರಾಣಿಗಳನ್ನು ದತ್ತು ಪಡೆದುಕೊಂಡು ಅರಮೆನೆಯ ಸುತ್ತ ಓಡಾಡಿ, ಮಾವಾಡಿಗಳಿಗೆ ಊಟ ಮಾಡಿಸಿ, ಯದುವೀರ್ ಅವರೊಡನೆ ಮಾತನಾಡಿ ಇಂದು ಬೆಳಗಿನ ಜಾವ ಹೊರಟ್ಟಿದ್ದರು. ಒಂದೇ ಕಾರಿನಲ್ಲಿ ದರ್ಶನ್, ನಟರಾದ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಪ್ರಯಾಣಿಸುತ್ತಿದ್ದರು. ಈ ವೇಳೆ ಮೈಸೂರಿನ ಹೊರವಲಯದ ಹಿನಕಲ್ ಬಳಿ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಅಪಘಾತದ ಬಳಿಕ ನಾಪತ್ತೆಯಾಗಿದ್ದ ದರ್ಶನ್ ಕಾರ್ ಪತ್ತೆಪರಿಣಾಮ ಅಪಘಾತದಲ್ಲಿ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಈ ಘಟನೆಯಲ್ಲಿ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆದಿದ್ದಾರೆ. ಮೈಸೂರಿನಲ್ಲಿ ಮುಂಜಾನೆ ಮಳೆಯಾಗುತ್ತಿದ್ದರಿಂದ ರಸ್ತೆ ಸರಿಯಾಗಿ ಕಾಣದ ಪರಿಣಾಮ ಅಪಘಾತವಾಗಿದೆ ಎನ್ನಲಾಗುತ್ತಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


