ಬೆಂಗಳೂರು: ದುನಿಯಾ ವಿಜಯ್ ಇಂದು ಒಂದೆಲ್ಲಾ ಒಂದು ತೊಂದರೆಗಳು ಶುರುವಾಗಿವೆ. ಶನಿವಾರ ರಾತ್ರಿ ಮಾರುತಿ ಗೌಡ ಎಂಬವರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಶನಿವಾರ ರಾತ್ರಿ ಬಂಧಿಸಿದ್ದರು. ಇದೀಗ ದುನಿಯಾ ವಿಜಿ ಜೊತೆಗೆ ಅವರ 2ನೇ ಪತ್ನಿ ಕೀರ್ತಿಗೂ ಸಂಕಷ್ಟ ಶುರುವಾಗಿದೆ.ದುನಿಯಾ ವಿಜಯ್ ಇಬ್ಬರು ಪತ್ನಿಯರು ಪರಸ್ಪರ ಕೈ ಕೈಮಿಲಾಯಿಸಿಕೊಂಡಿದ್ದಾರೆ. ಈ ಸಂಬಂಧ ವಿಜಯ್ ಮೊದಲ ಪತ್ನಿ ನಾಗರತ್ನ ಗಿರಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಮೂವರು ಮಕ್ಕಳನ್ನ ನನ್ನಿಂದ ದೂರ ಮಾಡಿ ಹಾಳು ಮಾಡುತ್ತಿದ್ದಾರೆ. ನನ್ನ ಮಗ ಹೇಗಿದ್ದಾನೆ ಅಂತಾ ನೋಡಲು ಹೋದಾಗ, 2ನೇ ಪತ್ನಿ ಕೀರ್ತಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಗೂಂಡಾಗಳನ್ನ ಛೂ ಬಿಟ್ಟು ಬೆದರಿಸಿದ್ದಾರೆ. ನನಗೆ ನ್ಯಾಯ ಬೇಕು, ಮಕ್ಕಳು ಬೇಕು ಎಂದು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.ನಾಗರತ್ನ ಅವರ ದೂರಿನ ಆಧಾರದ ಮೇಲೆ ಕೀರ್ತಿ ವಿರುದ್ಧ ಪೊಲೀಸರು 323, 504 ,506 34 ಸೆಕ್ಷನ್ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡರು. ಹಲ್ಲೆ, ಬೆದರಿಕೆ ಆರೋಪದಡಿ ಕೇಸ್ ಫೈಲ್ ಆಗಿದೆ. ಕೂಡಲೇ ಕೀರ್ತಿಯನ್ನ ಕರೆಸಿಕೊಂಡ ಪೊಲೀಸರು ವಿಚಾರಣೆ ನಡೆಸಿದರು. ಈ ವೇಳೆ ನಾಗರತ್ನಾ ಅವರೇ ನನ್ನ ಮೇಲೆ ಹಲ್ಲೆ ನಡೆಸಿದ್ರು ಅಂತಾ ಕೀರ್ತಿ ಆರೋಪಿಸಿದರು. ನಂತರ ಪೊಲೀಸರು ಮುಚ್ಚಳಿಕೆ ಬರೆಸಿಕೊಂಡು ಕೀರ್ತಿಯನ್ನು ಕಳಿಸಿಕೊಟ್ಟರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


