ಮಂಡ್ಯ: ಪಾದಚಾರಿಯಾಗಿ ಡಿಕ್ಕಿ ಹೊಡೆಯೋದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್ ಮನೆಯೊಳಗೆ ನುಗ್ಗಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ ಸುಮಾರು 5.30ಕ್ಕೆ ಮಂಡ್ಯ ಜಿಲ್ಲೆಯ ಮದ್ದೂರು ಮಳವಳ್ಳಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.45 ವರ್ಷದ ಮಹದೇವು ಸಾವನ್ನಪ್ಪಿದ ಪಾದಚಾರಿ. ಇಂದು ಬೆಳಗ್ಗೆ ಬಸ್ ಕೊಳ್ಳೇಗಾಲದಿಂದ ಬೆಂಗಳೂರಿಗೆ ಬರುತ್ತಿತ್ತು. ದಾರಿ ಮಧ್ಯೆ ಬಂದ ಪಾದಚಾರಿಯಾಗಿ ಡಿಕ್ಕಿ ಆಗೋದನ್ನು ತಪ್ಪಿಸಲು ಹೋದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಎರಡು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಮನೆಯೊಂದರ ಒಳಗೆ ನುಗ್ಗಿದೆ. ಮನೆಯಲ್ಲಿ ಮಲಗಿದ್ದ ಐವರಿಗೂ ಗಾಯಗಳಾಗಿದ್ದು ಎಲ್ಲರನ್ನು ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ ನಡೆಸಿದ್ದಾರೆ. ಬಸ್ ಮನೆಯೊಳಗೆ ನುಗ್ಗಿದ ಪರಿಣಾಮ ಟಿವಿ, ಫ್ರಿಜ್ ಸೇರಿದಂತೆ ಮನೆ ಸಂಪೂರ್ಣ ಜಖಂಗೊಂಡಿದೆ. ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


