ಕಲಬುರಗಿ: ಸ್ನೇಹಿತೆಯನ್ನು ಭೇಟಿಯಾಗಲು ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಕಡಗಂಚಿ ಬಳಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗ ಬಳಿ ನಡೆದಿದೆ.ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಮನೋಜ್ ಮೃತ ದುರ್ದೈವಿ. ಇವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮನೋಜ್ ಹೈದರಾಬಾದ್ ನಲ್ಲಿ ಕೆಲಸ ಮಾಡುತ್ತಿದ್ದು, ಭಾಲ್ಕಿ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದನು. ಈಕೆ ಎಂ.ಎ ಎಕನಾಮಿಕ್ಸ್ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಹೀಗಾಗಿ ಆಕೆಯನ್ನು ಭೇಟಿಯಾಗಲು ಬಂದಿದ್ದನು. ಶನಿವಾರ 7.30ರ ಸುಮಾರಿಗೆ ಇಬ್ಬರು ದುಷ್ಕರ್ಮಿಗಳು ಮನೋಜ್ ಗೆ ಚಾಕುವಿನಿಂದ ಇರಿದಿದ್ದಾರೆ. ಪರಿಣಾಮ ಮನೋಜ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ.ಘಟನಾ ಸ್ಥಳಕ್ಕೆ ಎಸ್‍ಪಿ ಎನ್.ಶಶಿಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


